ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮೊದಲ ದಿನವೇ 12 ಜನರಿಗೆ ಮನೆಯಲ್ಲಿಯೇ ಚಿಕಿತ್ಸೆ




ಧಾರವಾಡ prajakiran.com : ಕೋವಿಡ್ ಸೋಂಕು ಇದ್ದರೂ ಕೂಡ ರೋಗ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣವುಳ್ಳ ಜನರಿಗೆ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಇದ್ದು ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ಪಡೆಯುವ  ಅವಕಾಶ ಕಲ್ಪಿಸಿದ ಮೊದಲ ದಿನವೇ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ 12 ಜನ ಸ್ವಯಂ ಪ್ರೇರಣೆಯಿಂದ ಈ ಮಾದರಿಯ ಚಿಕಿತ್ಸೆ ಆಯ್ದುಕೊಂಡಿದ್ದಾರೆ.

ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ , ಕೋವಿಡ್ ಸೋಂಕು ಇದ್ದರೂ ರೋಗ ಲಕ್ಷಣ ರಹಿತರು  ಮನೆಗಳಲ್ಲಿಯೇ ಇದ್ದು ಚಿಕಿತ್ಸೆ ಪಡೆಯಲು ಸರ್ಕಾರ ನಿಯಮಗಳನ್ನು ರೂಪಿಸಿದೆ.



ಧಾರವಾಡ ಜಿಲ್ಲೆಯಲ್ಲಿ ಈ ಅವಕಾಶ ಜಾರಿಗೊಳಿಸಿದ ಮೊದಲ ದಿನದಂದೇ ಹುಬ್ಬಳ್ಳಿಯಲ್ಲಿ 11 ಹಾಗೂ ಧಾರವಾಡದಲ್ಲಿ ಒಬ್ಬ ವ್ಯಕ್ತಿ ಸೇರಿ ಒಟ್ಟು 12 ಜನರನ್ನು ಹೋಂ ಐಸೋಲೇಷನ್ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಕೋವಿಡ್ ದೃಢಪಟ್ಟ ನಂತರ ವೈದ್ಯರ ತಂಡವು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಂಡು ಶಿಫಾರಸ್ಸು  ಮಾಡುತ್ತದೆ.ಅದನ್ನು ಆಧರಿಸಿ ಕ್ರಮ ಜರುಗಿಸಲಾಗುತ್ತದೆಎಂದು ಜಿಲ್ಲಾಡಳಿತ ತಿಳಿಸಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *