ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಬರೋಬ್ಬರಿ 4 ಸಾವು 126 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 126 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2043 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಬರೋಬ್ಬರಿ 4 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  62ಕ್ಕೆ ಏರಿದೆ.  

ಭಾನುವಾರ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 677 ಜನ ಬಿಡುಗಡೆಯಾಗಿದ್ದಾರೆ. ಇನ್ನೂ 1304 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

ಜಿಲ್ಲೆಯಲ್ಲಿ 2013 ಜನರ ಕೋವಿಡ್  ವರದಿ ಬರವುದು ಬಾಕಿಯಿದೆ. ಇದಲ್ಲದೆ, ಇನ್ನೂ 26  ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.

ಸಾವನ್ನಪ್ಪಿದ್ದವರ ವಿವರ :  ಪಿ- 65306 ಸೋಂಕಿತ 45 ವರ್ಷದ ವ್ಯಕ್ತಿ, ಸಾರಿ ಕೇಸ್ (ತೀವ್ರ ಉಸಿರಾಟ) ದ ತೊಂದರೆಯಿಂದ ಬಳಲುತ್ತಿದ್ದರು.

ಪಿ-57869 ಸೋಂಕಿತ  50 ವರ್ಷದ ಮಹಿಳೆ, ಪಿ-57451 ಸೋಂಕಿತ 52 ವರ್ಷದ ಮಹಿಳೆ  ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದರು.

ಪಿ-44767 ಸೋಂಕಿತ 57 ವರ್ಷದ ವ್ಯಕ್ತಿ  ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ. ಇವರೆಲ್ಲರೂ ಚಿಕಿತ್ಸೆ ಫಲಿಸದೆ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *