ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 6 ಸಾವು 186 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 186 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1917 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 6 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  58ಕ್ಕೆ ಏರಿದೆ.  

ಶನಿವಾರ 50 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 643 ಜನ ಬಿಡುಗಡೆಯಾಗಿದ್ದಾರೆ. ಇನ್ನೂ 1216 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

ಸಾವನ್ನಪ್ಪಿದ್ದವರ ವಿವರ :  ಪಿ-58018 ಸೋಂಕಿತ 82 ವರ್ಷದ ವೃದ್ದ, ಪಿ-57513 ಸೋಂಕಿತ 30 ವರ್ಷದ ಮಹಿಳೆ, ಪಿ-48790 ಸೋಂಕಿತ 50 ವರ್ಷದ ವ್ಯಕ್ತಿ, ಪಿ-31811 ಸೋಂಕಿತ 69 ವರ್ಷದ ವೃದ್ದ ಸಾರಿ ಕೇಸ್ (ತೀವ್ರ ಉಸಿರಾಟ) ದ ತೊಂದರೆಯಿಂದ ಬಳಲುತ್ತಿದ್ದರು.

ಪಿ-57621 ಸೋಂಕಿತ 66 ವರ್ಷದ ವೃದ್ದೆ, ಪಿ-57872 ಸೋಂಕಿತ 70 ವರ್ಷದ ವೃದ್ದೆ ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದರು.

ಇವರೆಲ್ಲರೂ ಚಿಕಿತ್ಸೆ ಫಲಿಸದೆ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ.

 ಇದಲ್ಲದೆ, ಇನ್ನೂ 26  ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *