ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಬರೋಬ್ಬರಿ 6 ಸಾವು 200 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 200 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ  2243 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಬರೋಬ್ಬರಿ 6 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  68ಕ್ಕೆ ಏರಿದೆ.  

ಸೋಮವಾರ 33 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 710 ಜನ ಬಿಡುಗಡೆಯಾಗಿದ್ದಾರೆ. ಇನ್ನೂ 1465 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

ಇದಲ್ಲದೆ, ಇನ್ನೂ 26   ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.

ಸಾವನ್ನಪ್ಪಿದ್ದವರ ವಿವರ :  ಪಿ- 68713 ಸೋಂಕಿತ  56 ವರ್ಷದ ಮಹಿಳೆ, ಪಿ-64783 ಸೋಂಕಿತ 58 ವರ್ಷದ ವ್ಯಕ್ತಿ, ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದರು

ಪಿ-59778 ಸೋಂಕಿತ 35 ವರ್ಷದ ಮಹಿಳೆ, ಪಿ-59434 ಸೋಂಕಿತ 38 ವರ್ಷದ ಮಹಿಳೆ, ಪಿ-58735 ಸೋಂಕಿತ 48 ವರ್ಷದ ವ್ಯಕ್ತಿ, ಪಿ-28446 ಸೋಂಕಿತ 65 ವರ್ಷದ ವೃದ್ದ ಸಾರಿ ಕೇಸ್ (ತೀವ್ರ ಉಸಿರಾಟ) ದ ತೊಂದರೆಯಿಂದ ಬಳಲುತ್ತಿದ್ದರು.  

ಇವರೆಲ್ಲರೂ ಚಿಕಿತ್ಸೆ ಫಲಿಸದೆ ಜಿಲ್ಲೆಯ ವಿವಿಧ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *