ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 184 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.
ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4275 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.
ಧಾರವಾಡ ಜಿಲ್ಲೆಯಲ್ಲಿ ಶನಿವಾರವು 8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ 139ಕ್ಕೆ ಏರಿದಂತಾಗಿದೆ.
ಶನಿವಾರ ಜಿಲ್ಲೆಯಲ್ಲಿ 50 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ ಜನರು 1779 ಬಿಡುಗಡೆಗೊಂಡತಾಗಿದೆ. ಇನ್ನೂ 2357 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ ಎಂದು ವಿವರಿಸಿದೆ.
ಜಿಲ್ಲೆಯಲ್ಲಿ ಶನಿವಾರ ಎಂಟು ಜನರು ಚಿಕಿತ್ಸೆ ಫಲಿಸದೆ ಜಿಲ್ಲೆಯ ವಿವಿಧ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ.
ಇದಲ್ಲದೆ, ಇನ್ನೂ 39 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.