ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೊಂದು ಕೋವಿಡ್ -19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-3913 ನೇ ಸೋಂಕಿತ 54 ವರ್ಷದ ಪುರುಷ ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿ ಶಾಂತಿನಗರದ ವಿನಯ ಕಾಲನಿಯ ನಿವಾಸಿಯಾಗಿದ್ದು, ಮೇ 29 ರಂದು ಸೋಂಕು ದೃಢಪಟ್ಟಿದ್ದ ಪಿ-2710 ನೇ ಸೋಂಕಿತ 65 ವರ್ಷದ ಪುರುಷರೊಂದಿಗೆ ಸಂಪರ್ಕ ಹೊಂದಿದ್ದರಿಂದ ತಗುಲಿದೆ.
ಅವರನ್ನು ಹೋಂ ಕ್ವಾರಂಟೈನ್ ನಲ್ಲಿಇರಿಸಲಾಗಿತ್ತು. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಇಂದು ಸಂಖ್ಯೆ 51 ಕ್ಕೆ ಏರಿಕೆಯಾದಂತಾಗಿದೆ.
ಈ ಪೈಕಿ ಈಗಾಗಲೇ 27 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದ್ದಾರೆ.