ರಾಜ್ಯ

ರಾಜ್ಯ ಸರ್ಕಾರದ ಮಾರ್ಗಸೂಚಿ ಧಾರವಾಡದಲ್ಲಿ ಯಥಾವತ್ತಾಗಿ ಅನುಷ್ಠಾನ

ಧಾರವಾಡ prajakiran. com : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಚೈನ್‍ಲಿಂಕ್‍ನ್ನು ಕಟ್ ಮಾಡಲು ಹಾಗೂ ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ರಾಜ್ಯಸರ್ಕಾರವು ಏ.27 ರಿಂದ ಮೇ. 10 ರವರೆಗೆ ಘೋಷಿಸಿರುವ ಜನತಾ ಕಫ್ರ್ಯೂವನ್ನು ಸೂಚಿಸಿರುವ ಮಾರ್ಗಸೂಚಿಗಳನ್ವಯ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗುವದೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಇಂದು (ಏ.27) ರಂದು ಮಧ್ಯಾಹ್ನ ಮಾಧ್ಯಮದವರೊಂದಿಗೆ ನಡೆದ ವರ್ಚುವಲ್ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಬೆಡ್ ಕೊರತೆ ಇಲ್ಲ

ಧಾರವಾಡ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದಲ್ಲಿ 125 ಬೆಡ್‍ಗಳನ್ನು ಹಾಗೂ ಕಿಮ್ಸ್ ಆವರಣದ ತಾಯಿ ಮಕ್ಕಳ ಆಸ್ಪತ್ರೆ 100 ಹಾಗೂ ಕಿಮ್ಸ್ ಕಟ್ಟಡದಲ್ಲಿ 175 ಬೆಡ್‍ಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದುವರೆಗೂ ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆಯನ್ನು 2,25,278 ಜನರಿಗೆ ಹಾಗೂ 13,680 ಜನರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಹೋಟೆಲ್, ರೆಸ್ಟೊರೆಂಟ್ ತೆರೆಯಲು ಅವಕಾಶವಿದ್ದು, ಪಾರ್ಸೆಲ್ ನೀಡಲು ಮಾತ್ರ ಅನುಮತಿ ನೀಡಲಾಗಿದ್ದು, ಸಾಧ್ಯವಾದಷ್ಟು ಹೋಂ ಡೆಲಿವರಿ ಮಾಡಬೇಕು.

ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು, 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಜಿಲ್ಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನೇ ಜಿಲ್ಲಾಡಳಿತ ಪಾಲಿಸುತ್ತಿದ್ದು, ಜಿಲ್ಲಾಡಳಿತದಿಂದ ಪ್ರತ್ಯೇಕವಾಗಿ ಯಾವುದೇ ಹೆಚ್ಚಿನ ಮಾರ್ಗಸೂಚಿಗಳನ್ನು ಅಳವಡಿಸಲಾಗಿಲ್ಲ ಎಂದು ಅವರು ಹೇಳಿದರು.

ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ರೀತಿಯ ಪಾಸ್‍ಗಳನ್ನು ವಿತರಿಸುವುದಿಲ್ಲ. ಕಟ್ಟಡ, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಾರ್ಮಿಕರು ತಮ್ಮ ಸಂಸ್ಥೆಯ ಅಧಿಕೃತ ಪಾಸ್ ಅಥವಾ ಗುರುತಿನ ಪತ್ರ ಧರಿಸಿರಬೇಕು.

ಸಂಚರಿಸುವವರನ್ನು ಸಂಬಂಧಿಸಿದ ಅಧಿಕಾರಿಗಳು ತಪಾಸಣೆ ಮಾಡಿದಾಗ ಸಮರ್ಪಕ ದಾಖಲೆ ಹಾಗೂ ಸಮಂಜಸವಾದ ಉತ್ತರ ನೀಡಿ ಅನುಮತಿ ಪಡೆಯಬೇಕು.

ಸರ್ಕಾರ ನೀಡಿರುವ ನಿರ್ದೇಶನ ಹಾಗೂ ಮಾರ್ಗಸೂಚಿಗಳ ಆಧಾರದ ಮೇಲೆ ಮಹಾನಗರ ವ್ಯಾಪ್ತಿಯಲ್ಲಿ ಅನಗತ್ಯ ಸಂಚಾರ, ನಿರ್ಬಂಧಿಸಿದ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಮಾರ್ಗಸೂಚಿಯಲ್ಲಿ ಸರ್ಕಾರವು ತಿಳಿಸಿರುವ ಕಾಮಗಾರಿಗಳಿಗೆ ಹೋಗುವವರು ಸಂಬಂಧಿಸಿದ ಕೆಲಸ ಅಥವಾ ಏಜೆನ್ಸಿಯ ಪಾಸ್ ಹೊಂದಿರುವುದು ಕಡ್ಡಾಯ ಎಂದು ಅವರು ಹೇಳಿದರು.

ಜಿಲ್ಲಾಸ್ಪತ್ರೆ ಹಾಗೂ ಕಿಮ್ಸ್ ಆಸ್ಪತ್ರೆಯಲ್ಲಿ ಸಿಟಿಸ್ಕ್ಯಾನ್ ಉಚಿತವಾಗಿ ಮಾಡಲಾಗುತ್ತಿದೆ. ಜನರಿಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ತುರ್ತು ವಾಹನಗಳಿಗೆ ಅವಶ್ಯಕ ದಾಖಲೆ ನೋಡಿ ಪರವಾನಿಗೆ ನೀಡಲಾಗುವುದು. ರೈಲ್ವೆ, ವಿಮಾನಗಳಲ್ಲಿ ಪ್ರಯಾಣಿಸುವವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಪರವಾನಿಗೆ ಮೂಲಕ ಸಂಚರಿಸಲು ಅನುಮತಿ ನೀಡಲಾಗುವುದು.

ಕಟ್ಟಡ ಕಾಮಗಾರಿ, ಕೈಗಾರಿಕೆಗಳು ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆದು ಕಾರ್ಯ ನಿರ್ವಹಿಸಬಹುದು. ಮದುವೆಗೆ ಗರಿಷ್ಠ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಅದಕ್ಕಾಗಿ ಜಿಲ್ಲಾಡಳಿತದಿಂದ ಪಾಸ್ ನೀಡಲಾಗುತ್ತಿದೆ.

ಧಾರವಾಡದ ಟಾಟಾ ಹಿಟಾಚಿ ಕಂಪನಿಯಿಂದ ಹತ್ತುಲಕ್ಷ ರೂ.ಗಳ ಸಿಎಸ್‍ಆರ್ ನಿಧಿಯಲ್ಲಿ ಸುಮಾರು 100 ಹಾಸಿಗೆಗಳನ್ನು ಹಾಗೂ ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಷನ್ ಅವರು ಸುಮಾರು 25ಲಕ್ಷ ರೂ.ಗಳ ಸಿಎಸ್‍ಆರ್ ನಿಧಿಯಲ್ಲಿ ಅಗತ್ಯವಿರುವ ಹಾಸಿಗೆಗಳನ್ನು ಕಿಮ್ಸ್ ಹಾಗೂ ಜಿಲ್ಲಾಸ್ಪತ್ರೆಗೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

*ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದ ಮಹಾನಗರ ಪೊಲೀಸ್ ಆಯುಕ್ತ ಲಾಬೂರಾಮ್ ಮಾತನಾಡಿ*, ಮಹಾನಗರ ವ್ಯಾಪ್ತಿಯಲ್ಲಿ ಜನತಾ ಕಫ್ರ್ಯೂ ಆದೇಶವನ್ನು ಸಂಪೂರ್ಣವಾಗಿ ಮತ್ತು ಯಥಾವತ್ತಾಗಿ ಜಾರಿಮಾಡಲು ಕ್ರಮಕೈಗೊಳ್ಳಲಾಗಿದೆ.

ಅನಗತ್ಯ ಸಂಚಾರ ನಿರ್ಬಂಧಿಸಲಾಗಿದೆ. ಇಂದಿನಿಂದಲೇ ಪೊಲೀಸ್ ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡು ನಿಗದಿತ ಸ್ಥಳಗಳಲ್ಲಿ ಬ್ಯಾರಿಕೇಡ್‍ಗಳನ್ನು ಅಳವಡಿಸಿದ್ದಾರೆ.

ನಿಯಮ ಉಲ್ಲಂಘಿಸುವವರ ವಿರುದ್ಧ ಮತ್ತು ಅನಗತ್ಯ ಓಡಾಟ, ಸಂಚಾರ ಮಾಡುವವರ ಮೇಲೆ ಸೂಕ್ತ ಕ್ರಮ ಕೈಗೊಂಡು ವಾಹನಗಳನ್ನು ಸೀಜ್ ಮಾಡಲಾಗುವುದೆಂದು ಅವರು ಹೇಳಿದರು.

*ಇಂದಿನ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಮಾತನಾಡಿ*, ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಜನತಾ ಕಫ್ರ್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಪೊಲೀಸ್ ಇಲಾಖೆಯಿಂದ ಪೂರ್ಣಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ಗಡಿಭಾಗಗಳಲ್ಲಿ ಸಧ್ಯಕ್ಕೆ ಯಾವುದೇ ಚೆಕ್‍ಪೋಸ್ಟ್ ಮಾಡಿರುವುದಿಲ್ಲ. ಅಗತ್ಯ ಸೇವೆ ನೀಡುವ ಹಾಗೂ ಸರಕು ವಾಹನಗಳಿಗೆ ಪರವಾನಿಗೆ ನೀಡಲಾಗಿದ್ದು, ಉಳಿದ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಅಗತ್ಯ ವಸ್ತುಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃತಕ ಅಭಾವ ಸೃಷ್ಟಿಸಿದರೆ ಅಂತಹವರ ವಿರುದ್ಧ ಜಂಟಿಕಾರ್ಯಾಚಾರಣೆ ನಡೆಸಿ ಪ್ರಕರಣ ದಾಖಲಿಸಲಾಗುವುದೆಂದು ಅವರು ಹೇಳಿದರು.

*ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದ ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಅವರು ಮಾತನಾಡಿ*, ಅವಳಿ ನಗರದ ಜನತೆಗೆ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಕೊರತೆಯಾಗದಂತೆ ಮುಂಜಾಗೃತೆ ವಹಿಸಲಾಗಿದೆ. ಮಾರ್ಗಸೂಚಿಗಳ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಗಿದ್ದು, ಎಲ್ಲರೂ ಸಹಕಾರ ನೀಡಬೇಕೆಂದು ತಿಳಿಸಿದರು.

ಸಾರ್ವಜನಿಕರೊಂದಿಗೆ ವರ್ಚುವಲ್ ಸಭೆ : ಮಾಧ್ಯಮ ಪ್ರತಿನಿಧಿಗಳೊಂದಿಗೆ ವರ್ಚುವಲ್ ಸಭೆ ಜರುಗಿಸಿದ ನಂತರ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಹಾನಗರ ಪೊಲೀಸ್ ಆಯುಕ್ತ ಲಾಬೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡ ಅವರು ಜಿಲ್ಲೆಯ ಸಾರ್ವಜನಿಕರೊಂದಿಗೆ ವರ್ಚುವಲ್ ಸಭೆ ಜರುಗಿಸಿ ಕಫ್ರ್ಯೂ ಜಾರಿ ಅವಧಿಯಲ್ಲಿ ಅನುಮತಿಸಲಾಗುವ ಮತ್ತು ನಿರ್ಬಂಧಿಸಲಾಗಿರುವ ಕಾರ್ಯಚಟುವಟಿಕೆಗಳ ಕುರಿತು ಅನೇಕ ಪ್ರಶ್ನೆಗಳಿಗೆ ಉತ್ತರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *