ಧಾರವಾಡ prajakiran.com : ಧಾರವಾಡದ ಜಿಲ್ಲೆಯಲ್ಲಿ ಶನಿವಾರ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-1913 ನೇ ಸೋಂಕಿತ 51 ವರ್ಷದ ಪುರುಷ ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.
ಇವರು ಧಾರವಾಡ ಜಿಲ್ಲೆಗೆ ಬಂದ ಕೂಡಲೇಅವರ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.
ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.
ಈಗಾಗಲೇ ಜಿಲ್ಲೆಯ 9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ .
ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ವಿವರಿಸಿದ್ದಾರೆ.