ಅಪರಾಧ

ಧಾರವಾಡದಲ್ಲಿ ಅಪರಿಚಿತ ವಾಹನ ಡಿಕ್ಕಿ : ಬೈಕ್ ಸವಾರ ಸಾವು

ಧಾರವಾಡ prajakiran.com : ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಧಾರವಾಡದಲ್ಲಿ ಸಂಭವಿಸಿದೆ.

ತಾಲೂಕಿನ ಯರಿಕೊಪ್ಪ ಕ್ರಾಸ್ ಬಳಿಯ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಸೋಮವಾರ ಬೆಳಗಿನ ಜಾವ ಈ ರ್ದುಘಟನೆ ನಡೆದಿದೆ.

ಕಿತ್ತೂರ ತಾಲೂಕಿನ ಉಗರಕೋಡ ಗ್ರಾಮದ ತಾನಾಜಿ ಚಿದಾನಂದ ತಡಕೋಡ (೨೬) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.

ಈತನು ಹುಬ್ಬಳ್ಳಿ ಕಡೆಯಿಂದ ಕಿತ್ತೂರ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.

ಈ ಕುರಿತು ಧಾರವಾಡ  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *