ಜಿಲ್ಲೆ

ಧಾರವಾಡದ ಹಿರಿಯ ಬಿಜೆಪಿಯ ಮುಖಂಡ ಯಲ್ಲಪ್ಪ ಅರವಾಳದ ಕೋವಿಡ್ ಗೆ ಬಲಿ…!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ 74 ಬಿಜೆಪಿಯ ಮಾಜಿ ಅಧ್ಯಕ್ಷರಾಗಿದ್ದ ಹಾಗೂ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಹಾಲಿ ಸದಸ್ಯರಾಗಿದ್ದ ಬಿಜೆಪಿಯ ಮುಖಂಡ ಯಲ್ಲಪ್ಪ ಅರವಾಳದ (61) ಶನಿವಾರ ಶಿವಾಧೀನರಾದರು.

ಅವರು ಇತ್ತೀಚೆಗೆ ತಮ್ಮ ಇಬ್ಬರು ಪುತ್ರರ ಮದುವೆ ಮಾಡಿದ್ದರು.
ಅದರ ಬೆನ್ನಲ್ಲೇ ಅವರು ಕೋವಿಡ್ ಪಾಸಿಟಿವ್ ನಿಂದ ಬಳಲುತ್ತಿದ್ದರು‌.

ಹೀಗಾಗಿ ಅವರನ್ನು ಧಾರವಾಡದ
ಎಸ್ ಡಿ ಎಮ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಆದರೆ ಇಂದು ಚಿಕಿತ್ಸೆ ಫಲಿಸದೆ ವಿಧಿವಶರಾದರು.

ಅವರಿಗೆ ಇಬ್ಬರು ಗಂಡು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ.

ಅವರ ನಿಧನಕ್ಕೆ ಧಾರವಾಡ ಶಾಸಕ ಅರವಿಂದ ಬೆಲ್ಲದ ಸೇರಿ ಅನೇಕ ಮುಖಂಡರುವತೀವ್ರ ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *