ಧಾರವಾಡ prajakiran.com : ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕವಿವಿ ಮಾಜಿ ಸಿಂಡಿಕೇಟ್ ಸದಸ್ಯರು, ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಜಿಲಾಧ್ಯಕ್ಷರಾಗಿದ್ದ ಬಸವರಾಜ ಬಿಕ್ಕಣ್ಣವರ ಶನಿವಾರ ಸಂಜೆ ನಿಧನ ಹೊಂದಿದರು.
ಅವರು ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು.
ಅವರು ಪತ್ನಿ,ಮಗ ಹಾಗೂ ಅಪಾರ ಬಳಗ ಅಗಲಿದ್ದಾರೆ.
ಇವರ ಅಂತ್ಯಕ್ರಿಯೆ ಸೆ. 13ರಂದು ಭಾನುವಾರ 9 ಗಂಟೆಗೆ ಕಿತ್ತೂರಿನ ತೋಟದ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ