ರಾಜ್ಯ

ಧಾರವಾಡ ಜಿಲ್ಲೆಯ 30 ಜನರಿಗೆ ಪ್ಲಾಸ್ಮಾ ಚಿಕಿತ್ಸೆ

ಸಂಜೀವಿನಿಯಾಗಿರುವ ಹುಬ್ಬಳ್ಳಿಯ ಕಿಮ್ಸ್ ವೈದ್ಯರು

ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಕಿಮ್ಸ್ ವೈದ್ಯರು, ಅರೆವೈದ್ಯಕೀಯ ,ನರ್ಸಿಂಗ್ ಹಾಗೂ ಸಹಾಯಕ ಸಿಬ್ಬಂದಿ ತಂಡ ಕರೊನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ ಸರ್ಕಾರದ ವೈದ್ಯಕೀಯ ಸಂಸ್ಥೆಯೊಂದರ ಬಗ್ಗೆ ಜನಸಾಮಾನ್ಯರಲ್ಲಿದ್ದ ಭಾವನೆಗಳನ್ನೇ ಬದಲಿಸುವಲ್ಲಿ ಯಶಸ್ವಿಯಾಗಿದೆ.

ಕಿಮ್ಸ್  ಚಿಕಿತ್ಸೆಗೆ ಹೋದವರು ಮರಳಿ ಮನೆಗೆ ಬರುವುದಿಲ್ಲ ಎಂಬ ತಪ್ಪು  ಗ್ರಹಿಕೆಯೊಂದು ಕೆಲವು ಜನವರ್ಗದಲ್ಲಿತ್ತು. ಈಗ ಕಲ್ಪನೆ ನಿವಾರಣೆಯಾಗುವಷ್ಟರ ಮಟ್ಟಿಗೆ ಕರೋನಾ ಚಿಕಿತ್ಸೆಯಲ್ಲಿ ಯಶಗಳಿಸಿದ್ದಾರೆ ಎಂದರೆ ತಪ್ಪಾಗಲಾರದು.

ಹುಬ್ಬಳ್ಳಿಯ ಕಿಮ್ಸ್ ಉತ್ತರ ಕರ್ನಾಟಕದ ಜನರ ಜೀವನದ ಪಾಲಿಗೆ ಆಶಾಕಿರಣವಾಗಿ ಹೊರ ಹೊಮ್ಮಿದ್ದು, ಸಂಜೀವಿನಿ  ಎಂಬುದನ್ನು ಕಿಮ್ಸ್ ತಂಡ ಸಾಬೀತುಪಡಿಸುತ್ತಿದೆ.

ಲಕ್ಷಗಟ್ಟಲೆ ಹಣ ಖರ್ಚು ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಕರೋನಾಗೆ ಚಿಕಿತ್ಸೆ ಪಡೆದರೂ ಗುಣವಾಗುತ್ತಿಲ್ಲ. ಬದಲಿಗೆ ಕಿಮ್ಸ್ ಗೆ ದಾಖಲಾದವರು ಗುಣಮುಖರಾಗಿ ಮನೆಗೆ ಹೋಗುತ್ತಿದ್ದಾರೆ. ಬಹಳಷ್ಟು ರೋಗಿಗಳು ಕಿಮ್ಸ್ ಬಗ್ಗೆ ಗುಣಗಾನ ಮಾಡುತ್ತಿದ್ದಾರೆ.

ಕಿಮ್ಸ್ ಅಂದರೆ ಉತ್ತರ ಕರ್ನಾಟಕದ ಸಂಜೀವಿನಿ. ಉತ್ತರ ಕರ್ನಾಟಕದ ೮ ಜಿಲ್ಲೆಯ ಜನರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. 

ಆದರೆ ಕರೊನಾ ವಿಷಯ ದಲ್ಲಿ ಕರ್ನಾಟಕಕ್ಕೇ ಸಂಜೀವಿನಿ ಆಗಿದೆ. ದಕ್ಷಿಣ ಕರ್ನಾಟಕದ ಜನರು ಬಂದು ಕರೊನಾಗೆ ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. 

ಮೆಡಿಸಿನ್ ವಿಭಾಗದವರ ಮುಖ್ಯಪಾತ್ರ ಇದರಲ್ಲಿದೆ. ಡಾ. ಈಶ್ವರ ಹಸಬಿ, ಡಾ. ಸಚಿನ್ ಹೊಸಕಟ್ಟಿ, ಡಾ.ರಾಮ್ ಕೌಲಗುಡ್ಡ, ಡಾ. ಸಂಜಯ ನೀರಲಗಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಪ್ಯಾಥಾಲಜಿ, ಶ್ವಾಸಕೋಶ, ಇಎನ್ ಟಿ, ಶಸ್ತ್ರಚಿಕಿತ್ಸೆ, ಮೈಕ್ರೋಬಯಾಲಜಿ,ಅರವಳಿಕೆ ತಜ್ಞರ ಶ್ರಮವೂ ಇದೆ.

ಈಗಾಗಲೇ 600 ಬೆಡ್‌ ವ್ಯವಸ್ಥೆ ಮಾಡಲಾಗಿದೆ. ಇನ್ನೂ 400 ಬೆಡ್  ಹೆಚ್ಚಿಸುವ ಸಾಧ್ಯತೆ ಇದೆ. 30  ಜನರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿ ಹೆಸರು ಮಾಡಿದೆ ಕಿಮ್ಸ್. 16 ಜನರು ಪ್ಲಾಸ್ಮಾ ನೀಡಿ ರಾಜ್ಯ ಸರ್ಕಾರದ ಪ್ರೋತ್ಸಾಹಧನ ಪಡೆದಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ   ಮಹಾದೇವಪ್ಪ ನಾಯ್ಕರ್ , ಕಿಮ್ಸ್ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಸದಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈಗ ಚಿಕಿತ್ಸೆ ಪಡೆಯುತ್ತಿರುವ ಎಲ್ಲರಿಗೂ ಊಟ, ವಸತಿ, ಉಪಹಾರ, ಚಹಾ ಎಲ್ಲವೂ ಅಚ್ಚುಕಟ್ಟಾಗಿ ನಡೆಯುತ್ತಿದೆ. ಬಾತ್ ರೂಂ, ಶೌಚಾಲಯ ವೂ ನೈರ್ಮಲ್ಯದಿಂದ ಕೂಡಿವೆ. ಮನೆಯ ವಾತಾವರಣವೇ ನಿರ್ಮಾಣವಾಗಿದೆ. ವೈದ್ಯಕೀಯ ಸಿಬ್ಬಂದಿಯ ಸೇವೆ ಅನನ್ಯವಾಗಿದೆ ಎಂದು 

ಹುಬ್ಬಳ್ಳಿಯ ವಿಜಯಕುಮಾರ ತಮ್ಮ ಅನಿಸಿಕೆ ವ್ಯಕ್ತ ಪಡಿಸಿದ್ದಾರೆ.

ಕಿಮ್ಸ್ ತನ್ನ ಸಾಧನೆಯ ಇತಿಹಾಸ ವನ್ನು ರಾಜ್ಯಾದ್ಯಂತ ಪಸರಿಸುತ್ತಿದೆ. ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ ಚವ್ಹಾಣ ಅವರು ವೈದ್ಯಕೀಯ ತಂಡಕ್ಕೆ ಹುರುಪು ತುಂಬಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಜಗದೀಶ ಶೆಟ್ಟರ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಕಿಮ್ಸ್ ಪ್ರತಿ ಕೆಲಸಕ್ಕೂ ಬೆನ್ನೆಲುಬಾಗಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *