ರಾಜ್ಯ

ಧಾರವಾಡದಲ್ಲಿ ಭಾನುವಾರ 311 ಕರೋನಾ, 6 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ  311 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 13030 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 370ಕ್ಕೆ ಏರಿದಂತಾಗಿದೆ. 

ಭಾನುವಾರ ಜಿಲ್ಲೆಯಲ್ಲಿ 252  ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ  ಜನರು 9927 ಬಿಡುಗಡೆಗೊಂಡತಾಗಿದೆ.

ಇನ್ನೂ ಸಕ್ರಿಯ 2733 ಕರೋನಾ ಸೋಂಕಿತರು  ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

ಮೃತ  ಜನರ ಅಂತ್ಯಕ್ರಿಯೆಯನ್ನು ಕೋವಿಡ್ ನಿಯಮಾವಳಿಗಳ ಪ್ರಕಾರ ನೆರವೇರಿಸಲಾಗಿದೆ ಎಂದು ವಿವರಿಸಿದೆ.

ಇದಲ್ಲದೆ, ಇನ್ನೂ 68 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.  

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *