ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.
ಸೋಂಕಿತರ ಸಂಖ್ಯೆ ನಿನ್ನೆ ಸಾವಿರವಿತ್ತು. ಆದರೆ ಗುರುವಾರ ಕೊಂಚ ತಗ್ಗಿದ್ದು, ಇಂದು 824ಕ್ಕೆ ಇಳಿದಿದೆ.
ದುರಂತದ ಸಂಗತಿಯೆಂದರೆ ಇಂದು ಕೂಡ 6 ಸೋಂಕಿತರು ಸಾವಿಗೀಡಾಗಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 3 ಜನ ಸಾವನ್ನಪ್ಪಿದರೆ, ಲೈಪ್ ಲೈನ್ ನಲ್ಲಿ 2 ಮತ್ತು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಆತಂಕದ ವಿಚಾರವೆಂದರೆ 365 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5519 ಕ್ಕೆ ಎರಿಕೆ ಆಗಿದೆ.
ಸಮಾಧಾನದ ಸಂಗತಿಯೆಂದರೆ ಆಸ್ಪತ್ರೆಯಿಂದ 744 ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.