ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ೧೨೫, ೩ ತಾಲೂಕು ಆಸ್ಪತ್ರೆಗಳಲ್ಲಿ ತಲಾ ೫೦ ಹಾಸಿಗೆ 

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡಲು ಸಿದ್ಧತೆಗಳನ್ನು ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ.

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ೧೨೫ ಹಾಗೂ ಕುಂದಗೋಳ, ಕಲಘಟಗಿ ಹಾಗೂ ನವಲಗುಂದ ತಾಲೂಕು ಆಸ್ಪತ್ರೆಗಳಲ್ಲಿ ತಲಾ ೫೦ ಸೇರಿ ಒಟ್ಟು ೨೭೫ ಹಾಸಿಗೆಗಳಿಗೆ ಆಮ್ಲಜನಕ ಪೂರೈಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಕೊರೊನಾ ಚಿಕಿತ್ಸೆಗೆ ಯಾವುದೇ ವ್ಯತ್ಯಯವಾಗದಂತೆ ಎಲ್ಲ ಮುಂಜಾಗೃತಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ೧೨೫ ಹಾಸಿಗೆಗಳಿಗೆ ಆಮ್ಲಜನಕ ಪೂರೈಸುವ ಕಾಮಗಾರಿ ಬಹುತೇಕ ಪೂರ್ಣವಾಗಿದೆ.

 ಜುಲೈ ಅಂತ್ಯದವರೆಗೆ  ಈ ಹಾಸಿಗೆಗಳು ಚಿಕಿತ್ಸೆಗೆ ದೊರೆಯಲಿವೆ. ಮೂರು ತಾಲೂಕು ಆಸ್ಪತ್ರೆಗಳಲ್ಲಿ ತಲಾ ೫೦ ಹಾಸಿಗೆಗಳಿಗೆ ಆಮ್ಲಜನಕ ಪೂರೈಕೆ ಮಾಡುವ ತಾಂತ್ರಿಕ ಕೆಲಸಗಳು ನಡೆಯುತ್ತಿವೆ.

ಆಗಸ್ಟ್ ಮೊದಲ ವಾರದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ನಿರ್ಮಾಣ ಸಂಸ್ಥೆಯವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *