ಜಿಲ್ಲೆ

ಕೊನೆಗೂ ಬೋಗೂರ, ಮಾದನಬಾವಿಗೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕ

ಧಾರವಾಡ prajakiran.com :  ಧಾರವಾಡ ತಾಲೂಕಿನ ಮಾದನಬಾವಿಯಲ್ಲಿ ಮೇ 21ರಂದು ಬೋಗೂರ ಗ್ರಾಮದಲ್ಲಿ ಆ. 2ರಂದು ಅತ್ಯಾಚಾರಕ್ಕೊಳಗಾಗಿ ನೊಂದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಬಾಲಕಿಯರ ನಿವಾಸಕ್ಕೆ ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಅಧಿಕಾರಿಗಳು ನಿನ್ನೆ ಆಗಸ್ಟ್ ೧೦ ರಂದು ಭೇಟಿ ನೀಡಿದ್ದಾರೆ.

ಘಟನೆ ನಡೆದ ದಿನ ಇಲ್ಲವೇ ಘಟನೆ ನಡೆದ ನಂತರ ಮಾಹಿತಿ ಪಡೆದು ಕೂಡಲೇ ಸ್ಪಂದಿಸಬೇಕಾಗಿದ್ದ ಇಲಾಖೆಯೇ ಧಾರವಾಡ ಜಿಲ್ಲೆಯಾದ್ಯಂತ ಪ್ರತಿಭಟನೆ ಬಲಗೊಂಡ ನಂತರ ಎಚ್ಚೆತ್ತುಕೊಂಡಿರುವುದು ಮಕ್ಕಳ ಹಕ್ಕುಗಳ ಹೋರಾಟಗಾರರಿಗೆ ತೀವ್ರ ನೋವುಂಟು ಮಾಡಿದೆ ಎಂದು ಬಾಲನಂದನ ಟ್ರಸ್ಟ್ ಸದಸ್ಯ ನಾಗರಾಜ ಕಿರಣಗಿ ಬೇಸರ ವ್ಯಕ್ತಪಡಿಸಿದ್ದಾರೆ.  

ಪ್ರಕರಣ ಜರುಗಿದ ತಕ್ಷಣ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ವಿಶೇಷ ಮುತುರ್ವಜಿ ವಹಿಸಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ) ಅಡಿ ಪ್ರಕರಣ ದಾಖಲಾಗುವಂತೆ ನೋಡಿಕೊಳ್ಳಬೇಕಾದವರೇ ಹಾಗೂ ಪೊಲೀಸರಿಗೆ ಸೂಕ್ತ ಸಲಹೆ ಮಾರ್ಗದರ್ಶನ ನೀಡಬೇಕಾದವರೆ ಈ ರೀತಿಯ ದಿವ್ಯ ನಿರ್ಲಕ್ಷ್ಯ ತೋರಿಸುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಇದು ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಡುವೆ ಹೊಂದಾಣಿಕೆ ಕೊರತೆ ಇರುವುದು ಎದ್ದು ತೋರಿಸುತ್ತದೆ. ಈ ರೀತಿಯ ನಿರ್ಲಕ್ಷ್ಯ ಧೋರಣೆ ತೋರಿಸುವುದು ಸರಿಯಾದ ಬೆಳವಣಿಗೆ ಅಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನೂ ಒಂದು ದುರಂತದ ಹಾಗೂ ಅಚ್ಚರಿಯ ಸಂಗತಿಯೆಂದರೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಹಾಗೂ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧಿಕಾರಿಗಳು ಕೂಡ ಈ ಬಗ್ಗೆ  ನಿರ್ಲಕ್ಷ್ಯ ಧೋರಣೆ ತೋರಿಸಿರುವುದು ಬೇಸರದ ಸಂಗತಿಯಾಗಿದೆ.

ಅಲ್ಲದೆ ಅವರಿಬ್ಬರು ಹೋಗಿ ಸಂಬಂಧಪಟ್ಟ ಕುಟುಂಬದವರಿಗೆ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದು ಸೂಕ್ತ ಕ್ರಮ ಜರುಗಿಸಲು ಪ್ರಯತ್ನಿಸದಿರುವುದು ಅವರಿಗೆ ಮಕ್ಕಳ ಹಕ್ಕುಗಳ ಗೌರವ ಮತ್ತು ಅವರ ಮೇಲಿನ ನಿಸ್ಸಕಾಳಜಿ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಬೆಳವಣಗೆಗಳ ಹಿನ್ನಲೆಯಲ್ಲಿ ಈ ಬಗ್ಗೆ ಕೂಡಲೇ ಜಿಲ್ಲಾಡಳಿತ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮಹಿಳಾ ಮತ್ತುಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ಹಾಗೂ ಮಕ್ಕಳ ಹಕ್ಕುಗಳ ಕಾರ್ಯಕರ್ತರ ಸಭೆ ಕರೆದು ಇನ್ನೂ ಮುಂದೆ ಧಾರವಾಡ ಜಿಲ್ಲೆಯಲ್ಲಿ ಇಂತಹ ಘಟನೆ ಮರುಕಳಿಸದಂತೆ ಹಾಗೂ ಸಂಬಂಧಪಟ್ಟ ಪೋಕ್ಸೋ ಕಾಯ್ದೆ ಅಡಿ ಪೊಲೀಸರಿಗೆ ದೂರು ದಾಖಲಿಸಿಕೊಳ್ಳಲು ಮೀನಾಮೇಷ ಎಣಿಸದಂತೆ  ನಿರ್ದೇಶನ ನೀಡುವಂತೆ ಬಾಲನಂದನ ಟ್ರಸ್ಟ್ ಸದಸ್ಯ ನಾಗರಾಜ ಕಿರಣಗಿ   ಆಗ್ರಹಿಸಿದ್ದಾರೆ.   

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಡಿ.ಹೆಚ್. ಲಲಿತಾ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ ಭೇಟಿ ನೀಡಿ, ಅಪ್ರಾಪ್ತ ಬಾಲಕಿಯ ಪಾಲಕರೊಂದಿಗೆ ಮಾತುಕತೆ ನಡೆಸಿ ಘಟನೆಯ ಸಮಗ್ರ ಮಾಹಿತಿ ಪಡೆದರು.  ಈ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ತಂದೆ-ತಾಯಿಗಳಿಗೆ ಸಾಂತ್ವನ ಹೇಳಿ ಕಾನೂನು ಪ್ರಕಾರ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿದರು.

ನಂತರ ಧಾರವಾಡ ತಾಲೂಕಿನ ಮಾದನಭಾವಿ ಗ್ರಾಮದಲ್ಲಿ ಕಳೇದ ೩ ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಅವಳನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಮನೆ ಭೇಟಿ ಮಾಡಿ ಪಾಲಕರೊಂದಿಗೆ ಮಾತುಕತೆ ನಡೆಸಿ ಘಟನೆಯ ಸಮಗ್ರ ಮಾಹಿತಿಯನ್ನು ಅಧಿಕಾರಿಗಳು ಪಡೆದರು.

ಈ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ತಂದೆ-ತಾಯಿಗಳಿಗೆ ಸಾಂತ್ವನ ಹೇಳಿ ಕಾನೂನು ಪ್ರಕಾರ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಈ ಪ್ರಕರಣ ಕುರಿತಂತೆ ಗರಗ ಪೊಲೀಸ್ ಠಾಣೆಗೆ ಭೇಟಿ ಮಾಡಿ ಪ್ರಕರಣದ ಮಾಹಿತಿಯನ್ನು ಪೊಲೀಸ್ ಇಲಾಖೆಯಿಂದ ತಿಳಿದುಕೊಂಡು ಮುಂದಿನ ಕ್ರಮದ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಯಾದ ಮಹಮ್ಮದಅಲಿ ತಹಶೀಲ್ದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *