hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಮತ್ತೇ 56 ಜನರಿಗೆ ಕರೋನಾ….!




ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 56 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.

ಆತಂಕದ ಸಂಗತಿಯೆಂದರೆ 13 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಲ್ಪ ಸಮಾಧಾನದ ಸಂಗತಿಯೆಂದರೆ ಇವತ್ತು 22 ಜನ ಗುಣಮುಖರಾಗಿ ಮನೆಯತ್ತ ಹೆಜ್ಜೆ ಹಾಕಿದ್ದಾರೆ.



ಧಾರವಾಡ ಜಿಲ್ಲೆಯಲ್ಲಿ ನಿನ್ನೇ 18 ಜನರಿಗೆ ಹೇಗೆ ಕರೋನಾ ಬಂತು ಎಂಬ ಮಾಹಿತಿ ಇರದಿದ್ದರೆ ಇಂದು ಕೂಡ 11 ಜನರ ಕರೋನಾ ಸಂಪರ್ಕ  ಪತ್ತೆಯಾಗದಿರುವುದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

 (ಐಎಲ್ ಐ) ತೀವ್ರ ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ 24 ಜನರನ್ನು ಜಿಲ್ಲೆಯ ವಿವಿಧ  ನಿಯೋಜಿತ ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಿಸಿ ಗಂಟಲು ದ್ರವ ತಪಾಸಣೆ ನಡೆಸಿದಾಗ  ಕರೋನಾ ಪಾಸಿಟಿವ್  ಇರುವುದು ದೃಢಪಟ್ಟಿದೆ. 




ಅಂತರ್ ಜಿಲ್ಲೆಯ ಪ್ರಯಾಣ  ಮಾಡಿದ ಇಬ್ಬರಿಗೆ ಕರೋನಾ ಪಾಸಿಟಿವ್ ವಕ್ಕರಿಸಿದೆ. ಕರೋನಾ ಸೋಂಕಿತರ ಸಂಪರ್ಕದಿಂದ ನಿನ್ನೆ ಕೂಡ ಹದಿನೆಂಟು ಜನರಿಗೆ ಹರಡಿತ್ತು.

ಇಂದು ಕೂಡ ಮತ್ತೆ ಹದಿನೆಂಟು ಜನರಿಗೆ ಕರೋನಾ ವಕ್ಕರಿಸಿದೆ ಎಂದು ಆರೋಗ್ಯ ಇಲಾಖೆ ವಿವರಿಸಿದೆ.

ಜಿಲ್ಲೆಯಲ್ಲಿ ಸೋಮವಾರ ಒಂದು ಸಾರಿ ಕೇಸ್ ಪತ್ತೆಯಾಗಿದ್ದು, ಧಾರವಾಡ ಜಿಲ್ಲೆಯಲ್ಲಿ ಈವರೆಗೆ 260 ಜನ ಬಿಡುಗಡೆಗೊಂಡಿದ್ದರೆ, ಸಕ್ರಿಯ 339 ಜನರು ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.




ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ  611ಕ್ಕೆ ಏರಿಕೆಯಾದಂತಾಗಿದೆ.  ಇದಲ್ಲದೆ, 530 ಜನರ ವರದಿ ಬರುವುದು ಬಾಕಿಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈವರೆಗೆ ಧಾರವಾಡ ಜಿಲ್ಲೆಯಲ್ಲಿ ಚಿಕಿತ್ಸೆ ಫಲಿಸದೆ ಒಟ್ಟು 12 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.





PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *