ಆಧ್ಯಾತ್ಮ ಜಿಲ್ಲೆ

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ೪,೪೭೫ ಚಾಲ್ತಿ, ೧೦ ವ್ಯಾಜ್ಯಪೂರ್ವ ಪ್ರಕರಣಗಳ ಇತ್ಯರ್ಥ  

೨೫ ಕೋಟಿಗಿಂತ ಹೆಚ್ಚು ಮೊತ್ತ ವಸೂಲು

ಧಾರವಾಡ  prajakiran.com :  ಇ-ಲೋಕ್ ಅದಾಲತ್‌ನ್ನು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಧಾರವಾಡ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿತ್ತು.  

 ಈ ಲೋಕಅದಾಲತ್‌ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾಗಿರುವ ಉಮೇಶ್ ಎಮ್. ಅಡಿಗ ಅವರ ಮಾರ್ಗದರ್ಶನದಲ್ಲಿ ಧಾರವಾಡದಲ್ಲಿ ೧೩ ಪೀಠಗಳನ್ನು, ಹುಬ್ಬಳ್ಳಿಯಲ್ಲಿ ೧೬ ಪೀಠಗಳನ್ನು, ಕುಂದಗೋಳ, ನವಲಗುಂದ ಮತ್ತು ಕಲಘಟಗಿಯಲ್ಲಿ ತಲಾ ೨ ಪೀಠವನ್ನು ಸ್ಥಾಪಿಸಲಾಗಿತ್ತು.

ವಿವಿಧ ರೀತಿಯ ಸುಮಾರು ೭,೬೪೫ ಕ್ಕಿಂತ ಹೆಚ್ಚು ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ ೪,೪೭೫ ಚಾಲ್ತಿ ಇರುವ ಪ್ರಕರಣಗಳನ್ನು ಹಾಗೂ ೧೦ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಲಾಯಿತು. ಸುಮಾರು ೨೫ ಕೋಟಿಗಿಂತ ಹೆಚ್ಚು ಮೊತ್ತವನ್ನು ವಸೂಲು ಮಾಡಲಾಯಿತು.

ಲೋಕ ಅದಾಲತ್‌ನಲ್ಲಿ ಧಾರವಾಡ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಿವಿಧ ವಿಮೆ ಕಂಪನಿಯ ಅಧಿಕಾರಿಗಳು, ವಿಮೆ ಕಂಪನಿಯ ಪ್ಯಾನಲ್ ವಕೀಲರುಗಳು, ಎನ್.ಡಬ್ಲೂ.ಕೆ.ಆರ್.ಟಿ.ಸಿ. ಅಧಿಕಾರಿಗಳು, ಅರ್ಜಿದಾರರ ಪರ ವಕೀಲರುಗಳು, ಕಕ್ಷಿದಾರರು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಭಾಗವಹಿಸಿ ಸದರಿ ಇ-ಲೋಕ ಅದಾಲತ್‌ನ್ನು ಯಶಸ್ವಿಗೊಳಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಚಿಣ್ಣನ್ನವರ್ ಆರ್.ಎಸ್. ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *