ಜಿಲ್ಲೆ

ಧಾರವಾಡ ಜಿಲ್ಲೆಯ ಗ್ರಾ.ಪಂ.ಚುನಾವಣೆ ಮತದಾರರ ಪಟ್ಟಿ ಪ್ರಕಟ

ಹೆಸರು ಪರಿಶೀಲಿಸಿ ಸೇರ್ಪಡೆಗೆ ಅವಕಾಶ*

ಧಾರವಾಡ prajakiran.com : 2020 ನೇ ಸಾಲಿನ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ  ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯ 7 ತಾಲ್ಲೂಕುಗಳ ಒಟ್ಟು 144 ಗ್ರಾಮ ಪಂಚಾಯತಿಗಳ ಪೈಕಿ  ಡಿಸೆಂಬರ 2020 ಕ್ಕೆ   136 ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯವಾಗಲಿದೆ.

ತಹಶೀಲ್ದಾರ ಕಾರ್ಯಾಲಯಗಳಲ್ಲಿ  ಈ ಗ್ರಾ.ಪಂ.ಗಳ ಅಂತಿಮ ಮತದಾರರ ಪಟ್ಟಿಯನ್ನು ಅಗಸ್ಟ 31 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ. 

ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಮತದಾರರು ತಮ್ಮ ಹೆಸರುಗಳು ಅಂತಿಮ ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳುಬೇಕು.

ಚುನಾವಣೆ ನಡೆಯಲಿರುವ ಗ್ರಾಮೀಣ ಪ್ರದೇಶಗಳಲ್ಲಿ ಅರ್ಹತೆ ಹೊಂದಿರುವ ಮತದಾರರು ಇದ್ದಲ್ಲಿ ಅಂತಹ ಮತದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆಗಾಗಿ ಅರ್ಜಿಗಳನ್ನು ಮತದಾರರ ನೋಂದಣಾಧಿಕಾರಿಗಳಾದ ಉಪವಿಭಾಗಾಧಿಕಾರಿಗಳು, ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ತಹಶೀಲ್ದಾರರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ   ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *