dist hospital dharwad
ಅಂತಾರಾಷ್ಟ್ರೀಯ

ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ ಸ್ಥಾಪಿಸಿಲು 32.30 ಲಕ್ಷ ದೇಣಿಗೆ

ಧಾರವಾಡ prajakiran.com : ನ್ಯೂಯಾರ್ಕ್ ನಲ್ಲಿ ವಾಸವಾಗಿರುವ ಧಾರವಾಡದ ರವಿಶಂಕರ ಭೂಪಳಾಪುರ ಮತ್ತು ಜಯಾ ದಂಪತಿಗಳು ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ವಾರ್ಡ್   ಸ್ಥಾಪಿಸಿಲು ನ್ಯೂಯಾರ್ಕ್ ರೋಟರಿ ಜಿಲ್ಲೆ ಹಾಗೂ ತಮ್ಮ ಸ್ವಂತ ಕೊಡುಗೆಯಾಗಿ 32.30 ಲಕ್ಷ  ಸಹಾಯ ಮಾಡಿದ್ದಾರೆ ಎಂದು ಧಾರವಾಡ ರೋಟರಿ ಕ್ಲಬ್ ಸೆಂಟ್ರಲ್ ಮಾಜಿ ಗರ್ವನರ್ ಡಾ.‌ಕವನ ದೇಶಪಾಂಡೆ ತಿಳಿಸಿದರು.

ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಯೋಜನೆ ರೋಟರಿ ಕ್ಲಬ್ ಧಾರವಾಡ ಸೆಂಟ್ರಲ್ ಮಾಜಿ ಅಧ್ಯಕ್ಷ ಡಾ. ಕವನ ದೇಶಪಾಂಡೆ, ಕಿರಣ ಹಿರೇಮಠ ಹಾಗೂ ರೋಟರಿ ಫೌಂಡೇಶನ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ , ಲೊಜಿಸ್ಸಿಮೊ ಇಂಡಿಯಾ ಅವರ ಸಹಭಾಗಿತ್ವದಲ್ಲಿ ಅನುಷ್ಠಾನಗೊಳ್ಳಲಿದೆ ಎಂದರು.

ಈ ಕೋವಿಡ್ ವಾರ್ಡ್ ರವಿ ಮತ್ತು ಜಯಾ ಭೂಪಳಾಪುರ ಅವರ ಹೆಸರಿನಲ್ಲಿ ನಿರ್ಮಾಣ ಗೊಳ್ಳಲಿದೆ. ಅವರು ಧಾರವಾಡಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಇತ್ತೀಚೆಗೆ ಎರಡು ಸುಸಜ್ಜಿತ ತುರ್ತು ಚಿಕಿತ್ಸಾ ಸಾಧನಗಳನ್ನು ಒಳಗೊಂಡ ಆಂಬುಲೆನ್ಸ್ ಗಳನ್ನು ಪೊಲೀಸ್ ಇಲಾಖೆಗೆ ನೀಡಿದ್ದರು.

ಈಗಲೂ ಸಹ ಬಡ ರೋಗಿಗಳಿಗೆ ಅನುಕೂಲವಾಗುವಂತೆ ಈ ವಿಶೇಷ ತುರ್ತು ಚಿಕಿತ್ಸಾ ಘಟಕವನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ನೀಡುತ್ತಿದ್ದಾರೆ.

ಈ ಹೃದಯವಂತ ದಂಪತಿಗಳಿಗೆ ಧಾರವಾಡದ ಜನತೆಯ ಪರವಾಗಿ ಧನ್ಯವಾದಗಳು ಎಂದು ಹೇಳಿದರು.  ಈ ಸುದ್ದಿಗೋಷ್ಠಿಯಲ್ಲಿ ಕಿರಣ ಹಿರೇಮಠ ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *