ರಾಜ್ಯ

ಧಾರವಾಡದಲ್ಲಿ ಮಂಗಳವಾರ 204 ಜನರಿಗೆ ಕರೋನಾ, 8 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ  204 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 9670ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 281ಕ್ಕೆ ಏರಿದಂತಾಗಿದೆ. 

ಮಂಗಳವಾರ ಜಿಲ್ಲೆಯಲ್ಲಿ 213 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 6971ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 2418ಸಕ್ರಿಯ ಕರೋನಾ ಸೋಂಕಿತರು  ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

https://www.facebook.com/prajakirannews

ಇದಲ್ಲದೆ, ಇನ್ನೂ 68 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.  

ಮೃತ 8 ಜನರಅಂತ್ಯಕ್ರಿಯೆಯನ್ನು ಕೋವಿಡ್ ನಿಯಮಾವಳಿಗಳ ಪ್ರಕಾರ ನೆರವೇರಿಸಲಾಗಿದೆ ಎಂದು ವಿವರಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *