ಧಾರವಾಡ prajakiran.com : ಕೋವಿಡ್ ,ಹೆಚ್ ಐವಿ ಏಡ್ಸ್ ಹಾಗೂ ಇತರ ಅನಾರೋಗ್ಯ ಲಕ್ಷಣಗಳಿಂದ ಬಳಲುತ್ತಿದ್ದ ಪಿ-8753 ( 42 ವರ್ಷ ,ಪುರುಷ) ಜೂನ್ 24 ರ ರಾತ್ರಿ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.
ಒಣ ಕೆಮ್ಮು, ಆಹಾರ ನುಂಗಲು ತೊಂದರೆ, ನಿಶ್ಯಕ್ತಿ ಮತ್ತಿತರ ಲಕ್ಷಣಗಳಿಂದ ಬಳಲುತ್ತಿದ್ದರು ಹಾಗೂ ಪಿ- 6839 ಅವರೊಂದಿಗೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಜೂನ್ 21 ರಂದು ಕೋವಿಡ್ ದೃಢಪಟ್ಟಿತ್ತು.
ಶ್ವಾಸಕೋಶದ ಸಮಸ್ಯೆ ಮೊದಲಾದ ಕಾರಣಗಳಿಂದ ನಿನ್ನೆ ಜೂನ್ 24 ರಂದು ರಾತ್ರಿ 11.15 ಕ್ಕೆ ಕೊನೆಯುಸಿರೆಳೆದರು.
ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅಣ್ಣಿಗೇರಿ ತಾಲೂಕಿನ ಸಾಸ್ವಿಹಳ್ಳಿಯಲ್ಲಿ ಜೂನ್ 25 ರಂದು ಜರುಗಿತು.
ಈವರೆಗೆ ಧಾರವಾಡ ಜಿಲ್ಲೆಯಲ್ಲಿ ಮೂರು ಜನ ಸಾವನ್ನಪ್ಪಿದ್ದರು. ಶುಕ್ರವಾರ ಒಂದು ಬಲಿಯಾಗುವ ಮೂಲಕ ಜಿಲ್ಲೆಯ ಸಾವಿನ ಸಂಖ್ಯೆ ನಾಲ್ಕಕ್ಕೇ ಏರಿಕೆಯಾಗಿದೆ.
ಇನ್ನೂ 8 ಸೋಂಕಿತರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ವಿವರಿಸಿದೆ.