ರಾಜ್ಯ

ಧಾರವಾಡದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಗೆ ೪೭ ನೇ ಸಂಭ್ರಮ

ಧಾರವಾಡ prajakiran.com : “ಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೆ” ಜ್ಞಾನದ ಪ್ರಸಾರದಂತಹ ಪವಿತ್ರಕಾರ್ಯದಲ್ಲಿ ತೊಡಗಿದವರೆಲ್ಲ ಪೂಜಾರ್ಹರಾಗುತ್ತಾರೆ.

ಇಂತಹವರಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಗ್ರ ಗಣ್ಯರು. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕಾಣಿಕೆಅವಿಸ್ಮರಣೀಯವಾದುದು.

೧೯೭೦ ರಲ್ಲಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಾಗ ೧೯೭೩ ಅಕ್ಟೋಬರ್ ೧೮ ರಂದು ಪೂಜ್ಯ ಪೇಜಾವರ ಶ್ರೀಗಳ ಅಧ್ಯಕ್ಷತೆಯಲ್ಲಿ ಹಾಗೂ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯಾಧ್ಯಕ್ಷತೆಯಲ್ಲಿ ಉದಯಿಸಿದ ನೂತನ ಆಡಳಿತ ಮಂಡಳಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿತು. ಬಹುಶಃ ದಿನವೇ ಉತ್ತರ ಕರ್ನಾಟಕದ ಶೈಕ್ಷಣಿಕ ನಕಾಶೆಯನ್ನು ಬದಲಾಯಿಸಿತು ಎಂದರೆ ತಪ್ಪಾಗದು.

೧೯೭೩ ರಲ್ಲಿ ೬-ಸಂಸ್ಥೆ ಹಾಗೂ ೩೨೦ ವಿದ್ಯಾರ್ಥಿಗಳಿದ್ದ ಸಂಸ್ಥೆಗಳನ್ನು ಪೂಜ್ಯರು ವಹಿಸಿಕೊಂಡ ನಂತರದ ದಿನಗಳೆಲ್ಲವೂ ಸುವರ್ಣಾಕ್ಷರದಲ್ಲಿ ಬರೆಯುವಂತಹದ್ದು.

ಹಂತ ಹಂತವಾಗಿ ಆರ್ಥಿಕ ಚೇತರಿಕೆ ಕಂಡ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ನೂತನ ವಿದ್ಯಾ ಸಂಸ್ಥೆಗಳನ್ನು ಹುಟ್ಟು ಹಾಕುತ್ತ ಹೋಯಿತು.

ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೇ ಶ್ರೇಷ್ಠ ಮಟ್ಟದ ಶಿಕ್ಷಣ ನೀಡಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುತ್ತಾ ಪ್ರತಿಯೊಂದು ಶಿಕ್ಷಣ ಸಂಸ್ಥೆಯೂ ಆದರ್ಶವಾಗಿ ರೂಪಿತವಾಗುವಂತೆ ನೋಡಿಕೊಂಡಿರುವುದು ವಿಶೇಷ.

ಹೆಸರಿಗೆ ತಕ್ಕಂತೆ ಇರುವ ವಿದ್ಯಾಗಿರಿಯಲ್ಲಿ ಇದೀಗ ಕೆ.ಜಿ ಯಿಂದ ಪಿ.ಜಿ ಯವರೆಗೆ ಹಾಗೂ ಪಿ.ಹೆಚ್.ಡಿ ವಿದ್ಯಾಭ್ಯಾಸದವರೆಗೆ ಅವಕಾಶವಿದೆ.

ಜನತಾ ಶಿಕ್ಷಣ ಸಮಿತಿ ಇದೀಗ ಧಾರವಾಡದ ವಿದ್ಯಾಗಿರಿಯ ಕ್ಯಾಂಪಸ್ ಸೇರಿದಂತೆ ಹುಬ್ಬಳ್ಳಿಯೂ ಒಳಗೊಂಡಂತೆ ಒಟ್ಟು ಕ್ಯಾಂಪಸ್‌ನಲ್ಲಿ ೨೨ ವಿದ್ಯಾ ಸಂಸ್ಥೆಗಳಲ್ಲಿ ೨೦,೫೦೦ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಒಟ್ಟು ೧೨೦೦ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪೂರ್ವ ಪ್ರಾಥಮಿಕ, ಪ್ರಾಥಮಿಕ, ಫ್ರೌಡಶಿಕ್ಷಣ, ಸಿ.ಬಿ.ಎಸ್.ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಡಿಪ್ಲೋಮಾ ಕಾಲೇಜು, ಐ.ಟಿ.ಕಾಲೇಜು, ಪದವಿ ಕಾಲೇಜುಗಳು, ಕಾನೂನೂ ಮಹಾವಿದ್ಯಾಲಯ, ಬಿ.ಎಡ್ ಕಾಲೇಜು, ಎಂ.ಬಿ.ಕಾಲೇಜು, ಡಾ. ಡಿ. ವೀರೇಂದ್ರ ಹೆಗ್ಗಡೆ ಸಂಶೋಧನಾ ಕೇಂದ್ರ, ಆರ್ಥಿಕ ಸಂಶೋಧನಾ ಕೇಂದ್ರ ಅಲ್ಲದೇ ಸ್ನಾತಕೋತ್ತರ ಅಧ್ಯಯನ ಕೇಂದ್ರ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಆದೀನದಲ್ಲಿ ನಡೆಯುತ್ತಿವೆ.

ಕಳೆದ ೪೭ ವರ್ಷಳಲ್ಲಿ ಶೈಕ್ಷಣಿಕವಾಗಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ಬೃಹದಾಕಾರದಲ್ಲಿ ಬೆಳೆದಿದ್ದು, ಉತ್ತರ ಕರ್ನಾಟಕದ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಬಾರಿ ಬದಲಾವಣೆಯನ್ನು ತಂದಿದೆ.

ಪೂಜ್ಯ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಪೂಜ್ಯ ವಿಶ್ವಪ್ರಸನ್ನ ಸ್ವಾಮೀಜಿಯವರ ಆಶಿರ್ವಾದ ದಣಿವರಿಯದೇ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಪಣ ತೊಟ್ಟಿರುವ ಡಾ. ನ. ವಜ್ರಕುಮಾರರ ಕರ್ಣಧಾರತ್ವ, ಡಾ. ಅಜಿತ ಪ್ರಸಾದರವರ ದೂರದೃಷ್ಟಿಯ ಫಲವಾಗಿ ಜೆ.ಎಸ್.ಎಸ್ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ.

ಶಿಕ್ಷಣ ಸಂಸ್ಥೆಗಳನ್ನು ಕಟ್ಟುವದೆಂದರೆ, ದೇವಸ್ಥಾನಗಳನ್ನು ನಿರ್ಮಿಸಿದ್ದಷ್ಟೆ ಸಂತೋಷವಾಗುತ್ತದೆ. ಎನ್ನುವ ಪೂಜ್ಯ ಹೆಗ್ಗಡೆಯಯವರ ಮನದಾಳದ ಮಾತು.

ನನ್ನದೇನೂ ಇಲ್ಲ ಎಲ್ಲವೂ ಪೂಜ್ಯರ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ನಾನು ನಿಮಿತ್ತ ಮಾತ್ರ ಎನ್ನುವ ಡಾ. ನ. ವಜ್ರಕುಮಾರ ವಿನಯದ ಮಾತುಗಳೇ ಶಿಕ್ಷಣ ಸಂಸ್ಥೆಯನ್ನು ಇಷ್ಟೋಂದು ಉತ್ತುಂಗಕ್ಕೆ ಕೊಂಡೊಯ್ಯುತ್ತಿದೆ ಎಂದರೆ ಅತಿಶೋಕ್ತಿಯಾಗದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *