ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಜುಲೈ 15ರಿಂದ 24ರವರೆಗೆ  ಲಾಕ್ ಡೌನ್





ಧಾರವಾಡ prajakiran.com : ಧಾರವಾಡ: ಜಿಲ್ಲೆಯಾದ್ಯಂತ ಜುಲೈ 15 ರ ಬೆಳಿಗ್ಗೆ 10 ಗಂಟೆಯಿಂದ ಜುಲೈ 24 ರ ರಾತ್ರಿ 8 ಗಂಟೆಯವರೆಗೆ ಲಾಕ್ ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್  ಘೋಷಣೆ ಮಾಡಿದ್ದಾರೆ.

ಅವರು ಸೋಮವಾರ ಧಾರವಾಡ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿವರಿಸಿದರು.

ನಿರ್ಮಾಣ ಕಾಮಗಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನಾವಶ್ಯಕ ವಸ್ತುಗಳ ಪೂರೈಕೆ ಗೆ ವಿನಾಯಿತಿ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಅಧಿಕೃತವಾಗಿ ವಿವರ ಆದೇಶ ಹೊರಡಿಸುವರು ಎಂದು ಸ್ಪಷ್ಟಪಡಿಸಿದರು.



ಧಾರವಾಡ ಜಿಲ್ಲೆಯಿಂದ ಹೊರ ಹೋಗುವವರು ಹೋಗಲಿ, ಬೆಂಗಳೂರು ಮಾದರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಲ್ಲರ ಜೊತೆ ಮಾತುಕತೆ ನಡೆಸಿದ್ದೇನೆ ಎಂದರು.

ಲಾಕ್ಡೌನ್ ಆಗಲಿ ಎಂಬ ಸಲಹೆ ನೀಡಿದ್ದಾರೆ. ಈ ಕುರಿತು ವಿಡಿಯೋ ಕಾನ್ಪರೆನ್ಸ್ ದಲ್ಲಿ ಲಾಕ್ಡೌನ್ ಬಗ್ಗೆ ಕೇಳಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ಡೌನ್ ಅಧಿಕಾರ ನಮಗೇ ಕೊಟ್ಟಿದ್ದಾರೆ. ಆ ಹಿನ್ನೆಲೆ ಲಾಕ್ಡೌನ್ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಜನರು ಅನಗತ್ಯವಾಗಿ ಹೊರ ಹೋಗಬಾರದು. ಮಾಸ್ಕ ಕಡ್ಡಾಯವಾಗಿ ಧರಿಸಬೇಕು. ಧಾರ್ಮಿಕ ಕೇಂದ್ರಗಳಲ್ಲಿ ಹೆಚ್ಚು ಜನ ಸೇರಬಾರದು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *