ಅಪರಾಧ

ಧಾರವಾಡ ಟ್ರಾಫಿಕ್ ಪೇದೆ ರಾಜು ಕಟಗಿ ಇನ್ನಿಲ್ಲ

ಧಾರವಾಡ prajakiran.com : ಇಲ್ಲಿಯ ಧಾರವಾಡ ಸಂಚಾರ ಪೊಲೀಸ್ ಠಾಣೆಯ ಪೇದೆ ರಾಜು (ರಾಜೇಶ)ಕಟಗಿ ನಿನ್ನೇ ರಾತ್ರಿ ಧಾರವಾಡದ ಕಲಘಟಗಿ ರಸ್ತೆಯ ಪೃಥ್ವಿ ಗಾರ್ಡನ್ ಬಳಿಯ ಹಪ್ಸ್ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಗುರುವಾರ ಸಂಜೆ ಮೃತಪಟ್ಟಿದ್ದಾರೆ.

ಇವರ ಅಗಲಿಕೆಯಿಂದ ಧಾರವಾಡ ಸಂಚಾರ ಪೊಲೀಸ್ ಠಾಣೆಯಲ್ಲಿ ನೀರವ ಮೌನ ಆವರಿಸಿದೆ.

ಇವರ ಪತ್ನಿ ಕೂಡ ಅದೇ ಠಾಣೆಯಲ್ಲಿ ಎ ಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಇಬ್ಬರು ಮಕ್ಕಳು ಇದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *