ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮತ್ತೇರಡು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ :ವಿದ್ಯಾನಗರಿ ಧಾರವಾಡದ ಜಿಲ್ಲೆಯಲ್ಲಿ ಸೋಮವಾರ  ಸಂಜೆ ಮತ್ತೇ ಎರಡು   ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ-3397 ನೇ ಸೋಂಕಿತ 47 ವರ್ಷದ ಪುರುಷ ಇವರು ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದವರಾಗಿದ್ದು, ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಇವರನ್ನು ಎಸ್ ಡಿ ಎಂ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಸಲಾಗಿತ್ತು.

ಆನಂತರಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ನಂತರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಪಿ-3398 ನೇ ಸೋಂಕಿತ 25 ವರ್ಷದ ಪುರುಷ ಇವರು ಹುಬ್ಬಳ್ಳಿ ಶಹರ ನಿವಾಸಿಯಾಗಿದ್ದಾರೆ. ಇವರು ಬೆಂಗಳೂರಿನಿಂದ ಆಗಮಿಸಿರುವ  ಪ್ರಯಾಣದ ಹಿನ್ನೆಲೆ  ಹೊಂದಿದ್ದಾರೆ.

 ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 48 ಕ್ಕೆ ಏರಿಕೆಯಾಗಿದೆ. ಈ ಪೈಕಿ ಈಗಾಗಲೇ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಉಳಿದವರು  ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *