ರಾಜ್ಯ

ಧಾರವಾಡದಲ್ಲಿ ಮತ್ತೇರಡು ಕೋವಿಡ್  : ೬೮ ವರ್ಷದ ವೃದ್ದನ ಸೋಂಕಿನ ಮೂಲ ಹುಡುಕಾಟ

ಧಾರವಾಡ prajakiran.com : ಧಾರವಾಡದ ಜಿಲ್ಲೆಯಲ್ಲಿ ಇಂದು  ಎರಡು   ಕೋವಿಡ್ ಪಾಸಿಟಿವ್ ಪ್ರಕರಣಗಳು   ಪತ್ತೆಯಾಗಿದೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಡಿಡಬ್ಲ್ಯೂಡಿ ೬೫-  ಪಿ-  ೫೮೨೮ ನೇ ಸೋಂಕಿತ ೬೮ ವರ್ಷದ ಪುರುಷ ಇವರು ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ನಿವಾಸಿಯಾಗಿದ್ದು ತೀವ್ರ ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದರು.

ಇವರನ್ನು ತಪಾಸಣೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ದೃಢಪಟ್ಟಿದೆ. ಆದರೆ ಇವರಗೆ ಕರೋನಾ ಹೇಗೆ ಬಂತು ಎಂಬ ಸಂಪರ್ಕವನ್ನು ಆರೋಗ್ಯ ಇಲಾಖೆ ಪತ್ತೆ ಹಚ್ಚುತ್ತಿದೆ.



ಡಿಡಬ್ಲ್ಯೂಡಿ ೬೬- ಪಿ- ೫೮೨೯ ನೇ ಸೋಂಕಿತ ೫೬ ವರ್ಷದ ಮಹಿಳೆ ಇವರು ಮಹಾರಾಷ್ಟ್ರ ರಾಜ್ಯದಿಂದ ಧಾರವಾಡಕ್ಕೆ ಆಗಮಿಸಿದ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ಇವರನ್ನು ಧಾರವಾಡ ಜಿಲ್ಲಾಡಳಿತ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸಿದ್ದರು. ಇದೀಗಅವರಿಗೆ ಕರೋನಾ ದೃಢಪಟ್ಟ ಹಿನ್ನಲೆಯಲ್ಲಿ ಅವರನ್ನು ನಿಗದಿತ ಕರೋನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆ ಮೂಲಕ ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  ೬೬ ಕ್ಕೆ ಏರಿಕೆಯಾಗಿದೆ.

ಈ ಪೈಕಿ ಈಗಾಗಲೇ  ಒಟ್ಟು ೩೯  ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಇನ್ನುಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *