ರಾಜ್ಯ

ವಿದ್ಯಾನಗರಿ ಧಾರವಾಡದ ಇಬ್ಬರು ಮಹಿಳೆಯರಿಗೆ ಕರೋನಾ ಸೊಂಕು ಪತ್ತೆ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಪ್ರಕಟವಾದ ಹೆಲ್ತ್ ಬುಲೇಟಿನ್ ನಲ್ಲಿ ಮತ್ತೇರಡು  ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಸೋಂಕಿತರನ್ನು ಪಿ-2807 ನೇ 26 ವರ್ಷದ ಮಹಿಳೆ  ಹಾಗೂ ಪಿ-2808 27 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ.

ಇವರ ಪೈಕಿ  ಪಿ-2807 ನೇ 26 ವರ್ಷದ ಮಹಿಳೆ ಪಿ-1123ರ ಸೋಂಕಿತರ ಸಂಪರ್ಕದಿಂದ ಬಂದಿದ್ದರೆ, ಪಿ-2808 27 ವರ್ಷದ ಸೋಂಕಿತೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರಯಾಣ ಮಾಡಿದ ಹಿನ್ನೆಲೆ  ಹೊಂದಿದ್ದಾರೆ ಎಂದು ವಿವರಿಸಿದ್ದಾರೆ.

ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  46  ಕ್ಕೆ ಏರಿಕೆಯಾಗಿದೆ. 

ಪೈಕಿ ಈಗಾಗಲೇ  11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ನಿಯಂತ್ರಣದಲ್ಲಿದ್ದು, ಹೊರ ರಾಜ್ಯದಿಂದ ಬಂದವರಿಂದಲೇ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

ಅವರನ್ನು ಬಂದ ತಕ್ಷಣ ತಪಾಸಣೆಗೆ ಒಳಪಡಿಸಿ ಅಗತ್ಯ ಕ್ವಾರಂಟಿನ್ ಮಾಡಲಾಗುತ್ತಿದೆ.

ಬಗ್ಗೆ ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಅಭಯ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *