ರಾಜ್ಯ

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ವೀಕ್ಷಕರಾಗಿ ಡಾ: ಶಾಲಿನಿ ರಜನೀಶ್ ನೇಮಕ

ಧಾರವಾಡ prajakiran.com : ಕರ್ನಾಟಕ ವಿಧಾನ ಪರಿಷತ್‌ನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ: ಶಾಲಿನಿ ರಜನೀಶ ಅವರನ್ನು ವೀಕ್ಷಕರನ್ನಾಗಿ ಚುನಾವಣೆ ಆಯೋಗ ನೇಮಿಸಿದೆ.

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸಾರ್ವಜನಿಕರು ಈ ಚುನಾವಣೆಗೆ ಸಂಬಂಧಿಸಿದ ಅಹವಾಲುಗಳನ್ನು ಸಲ್ಲಿಸಲು ದೂರವಾಣಿ ಸಂಖ್ಯೆ : ೦೮೩೬-೨೪೪೫೫೬ ಅಥವಾ ಮೊಬೈಲ್ ಸಂಖ್ಯೆ ೯೪೪೯೮ ೪೭೬೪೫ ಮೂಲಕ ವೀಕ್ಷಕರನ್ನು ಸಂಪರ್ಕಿಸಬಹುದು ಎಂದು ಚುನಾವಣಾಧಿಕಾರಿಗಳು ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್  ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *