ರಾಜ್ಯ

ಧಾರವಾಡದ ಪಶ್ಚಿಮ ಪದವೀಧರ ಕ್ಷೇತ್ರದ ಅಂತಿಮ ಕಣದಲ್ಲಿ ೧೧ ಅಭ್ಯರ್ಥಿಗಳು

ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ  ಅಕ್ಟೋಬರ್ ೧೨ರಂದು ಯಾವುದೇ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆಯದ ಕಾರಣ ಅಂತಿಮವಾಗಿ ೧೧  ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಕಣದಲ್ಲಿ ಉಳಿದ ಅಭ್ಯರ್ಥಿಗಳು: ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷದ ಅಭ್ಯರ್ಥಿಗಳಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್.ಎಂ. ಕುಬೇರಪ್ಪ, ಜನತಾದಳ (ಜಾತ್ಯಾತೀತ)ಕಲ್ಲೂರ ಶಿವಶಂಕರ ಚನ್ನಪ್ಪ, ಭಾರತೀಯ ಜನತಾ ಪಕ್ಷದ ಸಂಕನೂರ. ಎಸ್.ವಿ., 

ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿ ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕಾಂಬಳೆ, ಶಿವಸೇನಾದ ಸೋಮಶೇಖರ್ ವ್ಹಿ. ಉಮರಾಣಿ, ಇತರ ಅಭ್ಯರ್ಥಿಗಳಾಗಿ ಪಕ್ಷೇತರರಾದ ದಸರಥ ಚಂದ್ರಹಾಸ ರಂಗರಡ್ಡಿ, ಬಿ.ಡಿ, ಹಿರೇಗೌಡರ, ಬಸವರಾಜ ಗುರಿಕಾರ, ಬಸವರಾಜ ಎಸ್. ತೇರದಾಳ, ನಾಗರಕಟ್ಟಿ ಮಹ್ಮದಶಫಿವುದ್ದೀನ್ ಎಸ್., ತಳವಾರ ಶಿವಕುಮಾರ್ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್  ತಿಳಿಸಿದ್ದಾರೆ.   

ಚುನಾವಣಾಧಿಕಾರಿಗಳೂ ಆಗಿರುವ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್,  ಸಹಾಯಕ ಚುನಾವಣಾಧಿಕಾರಿಯಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ಮತ್ತಿತರ ಅಧಿಕಾರಿಗಳು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸಿದರು.

ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾಗಿರುವ ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *