ಧಾರವಾಡ prajakiran.com : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ-ಧಾರವಾಡದ ಪೊಲೀಸರು ಯಶಸ್ವಿಯಾಗಿದ್ದಾರೆ.
ಧಾರವಾಡದ ರಾಜೀವ್ ಗಾಂಧಿನಗರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೋಂದ ಮಹಿಳೆ ಮಂಜುಳಾ ಗರಗ (40) ಈ ಕುರಿತು ನೀಡಿದ ದೂರಿನ ಮೇಲೆ ಆರೋಪಿ ಹುಬ್ಬಳ್ಳಿಯ ನಿವಾಸಿ ಯಲ್ಲಪ್ಪ ಎಲಿಗಾರ (48) ನನ್ನು ಬಂಧಿಸುವಲ್ಲಿ ವಿದ್ಯಾಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನೋಂದ ಮಹಿಳೆಯನ್ನು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆರೋಪಿಯ ವಿರುದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಉಲ್ಲಂಘನೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅಲ್ಲದೆ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ವಿದ್ಯಾಗಿರಿ ಪೊಲೀಸ್ ಇನ್ಸಪೆಕ್ಟರ್ ಮಹಾಂತೇಶ ಬಸಾಪೂರ ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.