ರಾಜ್ಯ

ಧಾರವಾಡ ಜಿ.ಪಂ. ಸದಸ್ಯ ಯೋಗೀಶ್‌ಗೌಡ ಕೊಲೆ‌ ಪ್ರಕರಣ : ಸಿಬಿಐನಿಂದ ಕಾಂಗ್ರೆಸ್ ಮುಖಂಡನ ವಿಚಾರಣೆ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ  ಗೌಡರ ಕೊಲೆ‌ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳ ತಂಡ ಮತ್ತಷ್ಟು ಚುರುಕುಗೊಳಿಸಿದೆ.

ಧಾರವಾಡದಲ್ಲಿಯೇ ಬಿಡಾರ ಹೂಡಿರುವ ಸಿಬಿಐ  ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಹನುಮಂತ ಕೊರವರ ಅವರನ್ನು ವಿಚಾರಣೆಗೆ ಒಳಪಡಿಸಿದೆ.

ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಮಧ್ಯಾಹ್ನ ವಿಚಾರಣೆಗೆ ಹಾಜರಾದ ಕಾಂಗ್ರೆಸ್ ಮುಖಂಡ ಹನುಮಂತ ಕೊರವರ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಒಡನಾಟ ಹೊಂದಿದ ಆರೋಪದ ಹಿನ್ನಲೆಯಲ್ಲಿ ಈ ವಿಚಾರಣೆ ನಡೆಸಿದೆ ಎನ್ನಲಾಗಿದೆ.

ಸಿಬಿಐ ಅಧಿಕಾರಿಗಳು ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನೇಕರನ್ನು ವಿಚಾರಣೆಗೆ ಒಳಪಡಿಸಿ ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿರುವುದು ಇಲ್ಲಿ ಸ್ಮರಿಸಬಹುದು..

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *