ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಯಾಗಿ
ಬಿ.ಎಸ್. ಮೂಗನೂರಮಠ ಅಧಿಕಾರ ಸ್ವೀಕಾರ
ಧಾರವಾಡ ಪ್ರಜಾಕಿರಣ.ಕಾಮ್ ಜು.05 : ಧಾರವಾಡ ಜಿಲ್ಲಾ ಪಂಚಾಯತಿಯಲ್ಲಿ ಯೋಜನಾ ನಿರ್ದೇಶಕರಾಗಿದ್ದ ಬಸಲಿಂಗಯ್ಯ ಎಸ್. ಮೂಗನೂರಮಠ ಅವರು ಜಿಲ್ಲಾ ಪಂಚಾಯಿತಿಯ ನೂತನ ಉಪಕಾರ್ಯದರ್ಶಿಗಳಾಗಿ ಅಧಿಕಾರ ವಹಿಸಿಕೊಂಡರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕಳೆದ 27 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಮೂಗನೂರಮಠ ಅವರು ನಿರ್ಗಮಿತ ಉಪಕಾರ್ಯದರ್ಶಿ ರೇಖಾ ಡೊಳ್ಳಿನ ಅವರಿಂದ ಇಂದು ಅಧಿಕಾರ ವಹಿಸಿಕೊಂಡರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ ಟಿ.ಕೆ. ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.