ಸಿನಿಮಾ

ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ವಿಧಿವಶ

ಮುಂಬೈ prajakiran.com : ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ ಬೆಳಗ್ಗೆ ವಿಧಿವಶರಾದರು.

98 ವರ್ಷದ ದಿಲೀಪ್ ಕುಮಾರ್ ಅವರು ಕಳೆದ ಹಲವು ದಿನಗಳಿಂದ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದರು.

ಈ ಹಿನ್ನೆಲೆಯಲ್ಲಿ ಅವರನ್ನು ಕೆಲ ದಿನಗಳ ಹಿಂದೆಯೇ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು.

ದಿಲೀಪ್ ಕುಮಾರ್ ಹಿಂದಿ ಸಿನಿಮಾ ರಂಗದಲ್ಲಿ ಐದು ದಶಕಗಳ ಕಾಲ ತಮ್ಮದೆ ಆದ ವಿಶಿಷ್ಟ ಛಾಪು ಮೂಡಿಸಿದ್ದರು.

ನೂರಾರು ಚಿತ್ರಗಳಲ್ಲಿ ಅಭಿನಯಿಸಿ, 80,90ರ ದಶಕದಲ್ಲಿ ತಮ್ಮ ಅಮೋಘ ನಟನೆಯ ಮೂಲಕ ನಾಡಿನ‌ ಮನೆ ಮಾತಾಗಿದ್ದರು.

ಒಂದು ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದ ಅವರಿಗೆ 1991 ರಲ್ಲಿ ದಾದಾಸಾಹೇಬ್ ಫಾಲ್ಕೆ 2015 ರಲ್ಲಿ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಗೌರವ, ಪುರಸ್ಕಾರ ಸಂದಿದ್ದವು.

ಬಾಲಿವುಡ್ ಧ್ರುವತಾರೆಯೊಂದು ಕಣ್ಮರೆಯಾಗಿದ್ದಕ್ಕೆ ದೇಶದ ಅನೇಕ ಗಣ್ಯರು, ನಟ,ನಟಿಯರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *