ರಾಜ್ಯ

ಭಾವೈಕ್ಯತೆಗೆ ಹೆಸರಾಗಿರುವ ಶಿರಹಟ್ಟಿ ಪರಂಪರೆ ಸಿಎಂ ತಿಳಿದುಕೊಂಡಿಲ್ಲ

ಹುಬ್ಬಳ್ಳಿ prajakiran. com : ಗದುಗಿನ ಲಿಂಗೈಕ್ಯ ತೋಂಟದಾರ್ಯ ಸಿದ್ದಲಿಂಗ ಶ್ರೀಗಳ ದಿನವನ್ನು ಭಾವೈಕ್ಯತೆ ದಿನವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದು, ಯಾರದೋ ಮನವಿಗೆ ಬೆಲೆ ಕೊಟ್ಟು ಹೇಳಿಕೆ ನೀಡಿರುವುದು ಬಹಳ ನೋವಿನ ಸಂಗತಿಯಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯ ದಿವಸ ಸಿಎಂ ಗದಗನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದು, ಆಘಾತಕಾರಿ ವಿಷಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾವೈಕ್ಯತೆಗೆ ಹೆಸರಾಗಿದ್ದ ಶಿರಹಟ್ಟಿ ಪರಂಪರೆಯನ್ನು ಸಿಎಂ ತಿಳಿದುಕೊಂಡಿಲ್ಲ. ರಾಜ್ಯದಲ್ಲಿ ಯಾವ ಮಠಗಳು ಭಾವೈಕ್ಯತೆಗೆ ಹೆಸರಾಗಿದೆ ಎಂಬುದನ್ನು ಸಿಎಂ ನೆನಪಿಟ್ಟುಕೊಳ್ಳಬೇಕಿದೆ ಎಂದು ನುಡಿದರು.

ಸಿಎಂ ಅವರೇ ನೀವು ಶಿರಹಟ್ಟಿ ಮಠಕ್ಕೆ ನೀವು ಬಹಳ ಸಲ ಬಂದಿದ್ದೀರಿ, ಯಾವುದೋ ಒತ್ತಡಕ್ಕೆ ಮಣಿದು ಈ ನಿರ್ಧಾರ ಘೋಷಿರುವುದು ಸರಿಯಲ್ಲ.

ಎರಡು ವರ್ಷದ ಹಿಂದೆ ವೀರಶೈವ, ಲಿಂಗಾಯತ ಸಮುದಾಯ ಎರಡು ಭಾಗ ಎಂದು ಹೇಳುತ್ತಿದ್ದರು, ಆದರೇ ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡಿದ್ದವರನ್ನು ನೀವು ಹೇಗೆ ಭಾವೈಕ್ಯತೆ ಮೂರ್ತಿ ಅಂತ ಹೇಳುತ್ತಿರಿ.

ಅಷ್ಟೇ ಅಲ್ಲದೇ ಒಂದು ಸಮುದಾಯದವರನ್ನು ಇಬ್ಭಾಗ ಮಾಡಿದ್ದವರನ್ನು ಭಾವೈಕ್ಯತೆ ಎಂದು ಹೇಗೆ ಹೇಳುತ್ತಿರಿ ಎಂದು ಪ್ರಶ್ನಿಸಿದರು.

ಶಿರಹಟ್ಟಿ ಫಕ್ಕಿರೇಶ್ವರ ಸ್ವಾಮಿಗಳಿಗೆ ಕೋಮು ಸೌಹಾರ್ದ ಪ್ರಶಸ್ತಿ ಕೊಡಲಾಯಿತು. ಆದರೇ ಆ ಸ್ವಾಮಿಗೆ ಪ್ರಶಸ್ತಿ ನೀಡಲಾಯಿತು ಎಂದರು.

ನೀವು ನೀಡಿದ ಹೇಳಿಕೆ ನಮ್ಮ ಸಮಾಜಕ್ಕೆ ಕೊಡಲಿ ಪೆಟ್ಟು ಕೊಟ್ಟಂತಿದೆ. ಸದಾಕಾಲವೂ ಆರ್.ಎಸ್.ಎಸ್ ಸಂಘ ಪರಿಹಾರ ವಿರೋಧ ಮಾಡುವ ಸ್ವಾಮೀಜಿಗೆ ಹೇಗೆ ಹೊಗಳುತ್ತಿರಿ.

ಆ ಸ್ವಾಮಿಗಳು ಆರ್.ಆರ್. ಎಸ್ ಸಂಘಪರಿವಾರವನ್ನು ವಿರೋಧ ಮಾಡುತ್ತಾ ಬಂದಿದ್ದರು. ಹೀಗಾಗಿ ಈ ಹೇಳಿಕೆಯನ್ನು ವಾಪಸ್ ಪಡೆಯಬೇಕೆಂದು ಶ್ರೀಗಳು ನುಡಿದರು.

ಹೇಳಿಕೆ ವಾಪಸ್ ಪಡೆಯದಿದ್ದರೆ ನಮ್ಮ ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡುತ್ತೇವೆ.
ಸಿಎಂ ನೀಡಿರುವ ಹೇಳಿಕೆ ಹಿಂಪಡೆಯದಿದ್ದರೆ ಅದರ ವಿರುದ್ದ ಹೋರಾಟ ಮಾಡುತ್ತೇವೇಂದು ಎಚ್ಚರಿಸಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಗೆ ಪತ್ರ ಬರೆಯುವುದಾಗಿ ಹೇಳಿದರು.

ಕೋಮುಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಈ ರೀತಿಯ ಅವೈಜ್ಞಾನಿಕ ಹೇಳಿಕೆಯಿಂದ ಕೋಮುಗಲಭೆ ಸೃಷ್ಟಿಯಾಗುತ್ತಿದೆ.

ಆದರಿಂದ ಕೋಮುಗಲಭೆಗೆ ಇಂದಿನ ರಾಜಕಾರಣವೇ ಪ್ರಮುಖ ಕಾರಣವೆಂದು ಶ್ರೀ ಗಳು ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *