ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯ ಸ್ಟಾಪ್ ನರ್ಸ್ ಗೂ ಕರೋನಾ …!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಾದ್ಯಂತ ಕರೋನಾ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ.

ಅದರಲ್ಲೂ ಕರೋನಾ ಸೇನಾನಿಗಳಾಗಿ ಅದರ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ  ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಯನ್ನುಂತೂ ಬೆಂಬಿಡದೆ ಕಾಡುತ್ತಿದೆ.

ಈಗಾಗಲೇ ಧಾರವಾಡದ ಸಂಚಾರ ಪೊಲೀಸ್ ಠಾಣೆ, ಶಹರ ಪೊಲೀಸ್ ಠಾಣೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ವೈದ್ಯ ಹಾಗೂ ಮೂವರು ಸ್ಟಾಪ್ ನರ್ಸ್ ಗಳಿಗೆ ಕರೋನಾ ಹರಡಿದೆ.



ಅದರ ಬೆನ್ನಲ್ಲೇ ಇದೀಗ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ಟಾಪ್ ನರ್ಸ್ ಗೂ ಕರೋನಾ ಬಂದಿರುವುದು ಜಿಲ್ಲಾಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಹಾಗೂ ಸ್ಟಾಪ್ ನರ್ಸ್ ಗಳಿಗೆ ಸಂಕಷ್ಟ ಎದುರಾಗಿದೆ.

ಎಲ್ಲಿ ಅವರಿಗೆ ನಮಗೆ ಬರುತ್ತೋ ಎಂದು ಆತಂಕದಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದ ಸಿಬ್ಬಂದಿ ಇದೀತ ಗಂಟಲು ದ್ರವ ತಪಾಸಣೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಂಕಿತ ಸ್ಟಾಪ್ ನರ್ಸ್ ಅನ್ನು ಧಾರವಾಡ ಜಿಲ್ಲಾಡಳಿತ ಪಿ- 23230 (53  ವರ್ಷ,ಮಹಿಳೆ ) ಧಾರವಾಡ ಮೆಹಬೂಬ್ ನಗರ ನಿವಾಸಿ ಎಂದು ಗುರುತಿಸಿದೆ.



ಅವರಿಗೆ ಪಿ-9416 ಅವರೊಂದಿಗೆ ಸಂಪರ್ಕದಿಂದ ಕರೋನಾ ಹರಡಿದೆ. ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಹೋಂ ಕ್ವಾರಂಟಿನ್ ಮಾಡಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಶನಿವಾರ ಹಾಗೂ ಭಾನುವಾರ ತಲಾ 45 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 555 ಕ್ಕೆ ಏರಿದೆ.

ಈ ಪೈಕಿ ಇದುವರೆಗೆ 238 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 305  ಸಕ್ರಿಯ ಕರೋನಾ ರೋಗ ಲಕ್ಷಣವುಳ್ಳ ಜನರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸೇರಿದಂತೆ ವಿವಿಧ ನಿಯೋಜಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

15 ಜನ ಐಸಿಯುನಲ್ಲಿದ್ದರೆ, 12 ಜನ ಈವರೆಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದು ಧಾರವಾಡ ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *