ಬೆಳಗಾವಿ prajakiran.com. : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಬೆಳಗಾವಿಗೆ ಆಗಮಿಸಿದರು.
ಈ ವೇಳೆ ಸಾಂಬ್ರಾ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಜಮಾಯಿಸಿದ
ಮಾಜಿ ಸಚಿವ ರಮೇಶ ಜಾರಕಿಹೊಳಿಯವರ ಬೆಂಬಲಿಗರು ಡಿಕೆಶಿ ಕಾರಿನ ಮೇಲೆ ಚಪ್ಪಲಿ ಎಸೆದರು.
ಅಲ್ಲದೆ, ಡಿಕೆ ಬೆಂಬಲಿಗರ ಕಾರಿನ ಗಾಜು ಪುಡಿ ಪುಡಿ ಮಾಡಿದರು.
ಇನ್ನೂ ಕೆಲವರು ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ಕೈಗೊಂಡರು ಪ್ರತಿಭಟನಾಕಾರರನ್ನು ನಿಯಂತ್ರಿಸುವಲ್ಲಿ ಪೊಲೀಸರು ವಿಫಲವಾದರು.
ಡಿಕೆ ಶಿವಕುಮಾರ್ ನಾಳೆ ಬೆಳಗಾವಿ ಉಪಚುನಾವಣೆಯ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್ ಮುಂಭಾಗದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ.