ರಾಜ್ಯ

ಕಾಲೇಜ್ ಆರಂಭ ಬಳಿಕ ಸೋಂಕು ಹೆಚ್ಚಳವಾದರೆ

ಧಾರವಾಡ prajakiran.com : ರಾಜ್ಯದಲ್ಲಿ ಕಾಲೇಜ್ ಆರಂಭ ಬಳಿಕ ಸೋಂಕು ಹೆಚ್ಚಳವಾದರೆ ಮತ್ತೆ ಕಾಲೇಜ್ ಬಂದ್ ಮಾಡುತ್ತೇವೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ ಹೇಳಿಕೆ ನೀಡಿದರು.

ಅವರು ಶನಿವಾರ
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

120ರಿಂದ 130 ಜನರಿಗೆ ಮಾತ್ರ ಕರೋನಾ ಬಂದಿದೆ ಅಂತಾ ಮಾಹಿತಿ ಇದೆ. ಯುವಕರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದೆ.

ಅವರ ಶೈಕ್ಷಣಿಕ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿ ಆಗಿದೆ.
ಈ ಜವಾಬ್ದಾರಿ ಹಿನ್ನೆಲೆಯಲ್ಲಿ ಕಾಲೇಜ್ ಆರಂಭ ಮಾಡಿದ್ದೇವೆ ಎಂದರು.

ಕರೊನಾ ಎರಡನೇ ಅಲೆ ವಿಶ್ವದಲ್ಲಿ ಎಲ್ಲ ಕಡೆ ಬರುತ್ತೇ… ಬಂದಿದೆ.
ನಮ್ಮ ದೇಶದಲ್ಲಿ ದೆಹಲಿ, ಅಹಮದಬಾದ್‌ನಲ್ಲಿ ಬಂದಿದೆ.

ಎರಡನೇ ಅಲೆ 45ದಿನದಿಂದ ಎರಡು ತಿಂಗಳು ಬಳಿಕ ಬರಲಿದೆ.
ಬಂದೇ ಬರುತ್ತೇ ಎನ್ನುವುದೇನಿಲ್ಲ.
ಅದು ನಮ್ಮ ಜನರ ನಡವಳಿಕೆ ಮೇಲೆ ಆಧಾರವಾಗಿದೆ
ಎಂದು ವಿವರಿಸಿದರು.

ಮಾರ್ಗಸೂಚಿ ಅನ್ವಯ ನಡೆದುಕೊಂಡರೇ ಎರಡನೇ ಅಲೆ ಬರುವುದು ಕಡಿಮೆ.
ಗಂಭೀರವಾಗಿ ತೆಗೆದುಕೊಂಡು ನಿಯಮ ಅನುಷ್ಠಾನಕ್ಕೆ ತರಬೇಕಿದೆ.

ಆದರೆ,ಜನ ಕರೊನಾ ಹೋಗಿದೆ ಎಂಬ ಭಾವನೆಯಲ್ಲಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕರೋನಾ ಲಸಿಕೆ ಸಿಗುವವರೆಗೂ ಕರೊನಾ ನಡವಳಿಕೆ ಸ್ವಾಭಾವಿಕವಾಗಿ ಜನರಲ್ಲಿ ಬರಬೇಕು ಎಂದು ಸಲಹೆ ನೀಡಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರ :
ರಾಜ್ಯದ ಸಿಎಂ‌ ಬಿ.ಎಸ್. ಯಡಿಯೂರಪ್ಪ ಹಾಗೂ ದೆಹಲಿ ನಾಯಕರು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ.

ಪದೇ ಪದೇ ವ್ಯಾಖ್ಯಾನ ಮಾಡುವುದು ಸರಿಯಲ್ಲಎಂದು ಡಾ.ಕೆ. ಸುಧಾಕರ್ ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *