ಸಿನಿಮಾ

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ ಹತ್ತು ಜನರ ಬಂಧನ…..!

ಮುಂಬೈ prajakiran.com : ಹಿಂದಿ ಚಿತ್ರರಂಗದ ಹಿರಿಯ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗೆ ಎನ್ ಸಿ ಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ಈ ಕುರಿತು ಮಾಧ್ಯಮ ಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ‌.

ಗೋವಾದಿಂದ ಮುಂಬೈನ ಸಮುದ್ರದ ಮಧ್ಯೆ ಐಷಾರಾಮಿ ಕ್ರೂಸರ್ ಹಡಗಿನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಎನ್ ಸಿಬಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.

ಆರ್ಯನ್ ಖಾನ್ ಜೊತೆಗೆ ಹಲವು ಉದ್ಯಮಿಗಳ ಮಕ್ಕಳು, ಸೆಲೆಬ್ರಿಟಿಗಳ ಮಕ್ಕಳು ಡ್ರಗ್ಸ್ ಪಾರ್ಟಿಯಲ್ಲಿ ತೊಡಗಿದ್ದರು ಎಂದು ಹೇಳಿದರು.

ಹೀಗಾಗಿ 10 ಜನರನ್ನು ವಶಕ್ಕೆ ಪಡೆಯಲಾಗಿದೆ.

ಪಾರ್ಟಿಯಲ್ಲಿ ತೊಡಗಿದ್ದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ.

ಪಾರ್ಟಿಯಲ್ಲಿ ಒಬ್ಬರಿಗೆ 80ರಿಂದ 2 ಲಕ್ಷ ರೂಪಾಯಿ ವರೆಗೆ ಟಿಕೆಟ್ ದರ ವಿಧಿಸಲಾಗಿತ್ತು.

ಪಾರ್ಟಿಯಲ್ಲಿ 80ಕ್ಕೂ ಹೆಚ್ಚು ಹೈ ಪ್ರೊಫೈಲ್ ವ್ಯಕ್ತಿಗಳು ಭಾಗಿಯಾಗಿದ್ದರು.

ಅಲ್ಲದೇ ವಶಕ್ಕೆ ಪಡೆದಿದ್ದ 10 ಜನರು ಡ್ರಗ್ಸ್ ಸೇವಿಸಿದ್ದರು ಎಂಬ ಸಂಶಯದ ಮೇಲೆ ಅವರನ್ನು ವೈದ್ಯಕೀಯ
ತಪಾಸಣೆಗೆ ಒಳಪಡಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *