ರಾಜ್ಯ

ಡ್ರಗ್ಸ್ ಮಾಫಿಯಾ ವಿರುದ್ದ ಸೂಕ್ತ ಕಾನೂನು ಜಾರಿಗೆ ಎಬಿವಿಪಿ ವತಿಯಿಂದ ಪತ್ರ ಚಳುವಳಿ

ಬಂಟ್ವಾಳ prajakiran.com : ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾವಿರುದ್ದ ಸೂಕ್ತ ಕಾನೂನು ರೂಪಿಸಿ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ  ವತಿಯಿಂದ ರಾಜ್ಯಾದ್ಯಂತ ಪತ್ರ ಚಳುವಳಿಗೆ ಕರೆ ನೀಡಿದೆ.

ಇದರ ಅಂಗವಾಗಿ ಬಂಟ್ವಾಳ ಶಾಖೆ ವತಿಯಿಂದ ಬಿಸಿರೋಡು ಹಾಗೂ ಸಿದ್ದಕಟ್ಟೆ  ಅಂಚೆ ಕಚೇರಿ ಬಳಿ ಪತ್ರ ಚಳುವಳಿಯನ್ನು ಹಮ್ಮಿಕೊಂಡಿತ್ತು.

ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವ್ಯಾಪಿಸಿದೆ.ಈ ಜಾಲಕ್ಕೆ ಪ್ರಮುಖವಾಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಬಹು ಪ್ರಭಾವಿಗಳು ಭಾಗಿಯಾಗಿರುವ ಈ ಜಾಲವನ್ನು ಮಟ್ಟ ಹಾಕುವ ಸವಾಲು ರಾಜ್ಯ ಸರ್ಕಾರದ ಮುಂದಿದೆ.ಅದಕ್ಕಾಗಿ ಪ್ರಬಲ ಕಾನೂನನ್ನು ರೂಪಿಸುವುದು ಮಾತ್ರ ಪರಿಹಾರ.

ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆಯ ವಿರುದ್ದ ಸಮರ ಸಾರಬೇಕೆಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪತ್ರ ಚಳುವಳಿಯ ಮೂಲಕ ಆಗ್ರಹಿಸಿದೆ.

ಈ ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ,ನಗರ ಕಾರ್ಯದರ್ಶಿ ಅಖಿಲಾಷ್,ಕಾಲೇಜು ಘಟಕದ ಅದ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ,ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ ,ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *