ರಾಜ್ಯ

ಪಾರ್ಶ್ವವಾಯು ಪೀಡಿತ ಶಿಕ್ಷಣಾಧಿಕಾರಿಗೆ ಸ್ವಯಂ ನಿವೃತ್ತಿ ಆದೇಶ ಹಸ್ತಾಂತರ

ಶೀಘ್ರ  ನಿವೃತ್ತಿಯ ಎಲ್ಲಾ ಸೌಲಭ್ಯಗಳು

ಅನುಕಂಪ ಆಧಾರಿತ ನೌಕರಿ ಸಚಿವ ಸಂಪುಟಸಭೆಯಲ್ಲಿ ನಿರ್ಧಾರ

ಮಹದೇವ ಮಾಳಗಿ ನಿವಾಸಕ್ಕೆ ಸಚಿವ ಎಸ್.ಸುರೇಶಕುಮಾರ್ ಭೇಟಿ,

ಧಾರವಾಡ prajakiran.com : ಕಳೆದ ಐದು ವರ್ಷಗಳ ಹಿಂದೆ ಪಾರ್ಶ್ವವಾಯು ಪೀಡಿತರಾಗಿ ಶೇ.100 ರಷ್ಟು ಅಂಗವೈಕಲ್ಯದಿಂದ  ಹಾಸಿಗೆ ಹಿಡಿದಿರುವ ಕೆಇಎಸ್ ಅಧಿಕಾರಿ, ಬೆಳಗಾವಿ ಡಯಟ್ ಹಿರಿಯ ಉಪನ್ಯಾಸಕ ಮಹದೇವ ಬ.ಮಾಳಗಿ ಅವರ ನಿವಾಸಕ್ಕೆ ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಗುರುವಾರ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ಅಲ್ಲದೆ, ಇದೇ ವೇಳೆ ಅಧಿಕಾರಿಯ ಸ್ವಯಂ ನಿವೃತ್ತಿ ಆದೇಶವನ್ನು ಹಸ್ತಾಂತರಿಸಿ, ಮಾನವೀಯ ಮೌಲ್ಯವನ್ನು ಎತ್ತಿ ಹಿಡಿದರು.

1999 ಬ್ಯಾಚಿನ ಕೆಇಎಸ್ ಅಧಿಕಾರಿಯಾಗಿರುವ ಮಹದೇವ ಮಾಳಗಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಡಯಟ್ ಹಿರಿಯ ಉಪನ್ಯಾಸಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ‌‌.

2015 ಜನವರಿ 15 ರಂದು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿರುವುದರಿಂದ , ಅವರ ದೈಹಿಕ ಸಾಮರ್ಥ್ಯ ಇಲ್ಲದಿರುವದನ್ನು ಪರಿಗಣಿಸಿ ಸರ್ಕಾರ ಸ್ವಯಂ ನಿವೃತ್ತಿ ಆದೇಶ ನೀಡಿದೆ.

ಇದರಿಂದ ಅವರಿಗೆ ನಿವೃತ್ತಿ ನಂತರದ ಎಲ್ಲಾ ಸೌಲಭ್ಯಗಳು ದೊರೆಯಲಿವೆ.ಕುಟುಂಬದ ಸದಸ್ಯರು ಅನುಕಂಪ ಆಧಾರಿತ ನೌಕರಿಗೆ ಮನವಿ ಮಾಡಿದ್ದಾರೆ.

ಇದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಬೇಕಾದ ವಿಷಯವಾಗಿರುವದರಿಂದ ಮುಂಬರುವ ದಿನಗಳಲ್ಲಿ ವಿಷಯವನ್ನು ಸಭೆಗೆ ಮಂಡಿಸಲು ತಮ್ಮ ಶಕ್ತಿಮೀರಿದ ಪ್ರಯತ್ನ ಮಾಡುತ್ತೇನೆ.

ಮುಖ್ಯಮಂತ್ರಿಗಳು ಈ ಕುರಿತು ನಿರ್ಣಯ ಕೈಗೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ಸಚಿವರಾದ ಎಸ್.ಸುರೇಶಕುಮಾರ್ ಹೇಳಿದರು.

ಶಾಸಕರಾದ ಅರವಿಂದ ಬೆಲ್ಲದ ಮಾತನಾಡಿ, ಅಧಿಕಾರಿಯ ವೈದ್ಯಕೀಯ ವೆಚ್ಚದ ಮರುಪಾವತಿಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.

ಮಹದೇವ ಮಾಳಗಿ ಅವರ ಪತ್ನಿ ಪ್ರಭಾವತಿ, ಮಕ್ಕಳಾದ ಸಮೀಕ್ಷಾ, ಸಂಪದಾ ತಮ್ಮ ಸಂಕಷ್ಟಗಳನ್ನು ಸಚಿವರಿಗೆ ನಿವೇದಿಸಿಕೊಂಡರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ವಿ.ಸಂಕನೂರ, ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಉಪನಿರ್ದೇಶಕ ಮೋಹನಕುಮಾರ್ ಹಂಚಾಟೆ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎ‌.ಖಾಜಿ,ಉಮೇಶ್ ಬೊಮ್ಮಕ್ಕನವರ ಮತ್ತಿತರರು ಇದ್ದರು.

ಈ ಬಗ್ಗೆ ಪ್ರಜಾಕಿರಣ.ಕಾಮ್ ಸಮಗ್ರ ವರದಿ ಪ್ರಕಟಿಸಿ ಸರಕಾರದ ಗಮನ ಸೆಳೆದಿತ್ತು. ಜೊತೆಗೆ ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ, ವಿವಿಧ ಸಂಘ ಸಂಸ್ಥೆಗಳ ಮೂಲಕ ಸರಕಾರಕ್ಕೆ ಹಾಗೂ ವಿಶೇಷವಾಗಿ ಜಾಣಕುರುಡತನ ತೋರಿಸಿದ್ದ ಶಿಕ್ಷಣ ಇಲಾಖೆ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ, ಶಿಕ್ಷಣ ಸಚಿವರ ಗಮನ ಸೆಳೆಯುವ ಮೂಲಕ ಒತ್ತಡ ಹೇರಿದ್ದನ್ನು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *