education minister sureshkumar
ರಾಜ್ಯ

ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು prajakiran.com : ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿ, ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಮುಖಪುಸ್ತಕದಲ್ಲಿ ಬರೆದುಕೊಂಡಿರುವಅವರು, #ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ ಎಂದು ವಿವರಿಸಿದ್ದಾರೆ.

ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರಹಾಗೂ ಅದರ ಸಮರ್ಪಕವಿಶ್ಲೇಷಣೆಪೂರ್ಣಗೊಳ್ಳುವವರೆಗೂ ವಿದ್ಯಾಗಮಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅದಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿದ್ದಾರೆ.

ಈ ಕುರಿತು ವ್ಯಾಪರ ಪರ ವಿರೋಧ ವ್ಯಾಪಕ ಟೀಕೆಗಳು, ಸ್ವಾಗತ ವ್ಯಕ್ತವಾಗಿದ್ದು, ಬಡ ಮಕ್ಕಳ ಶಿಕ್ಷಣಕ್ಕೆ ಕರೋನಾ ಹೆಸರಿನಲ್ಲಿ ಲಗಾಮು ಹಾಕಿರುವುದಕ್ಕೆ ಅನೇಕರು ಅಸಮಾಧಾನ ಹೊರ ಹಾಕಿರುವುದು ಮಾತ್ರ ಗುಟ್ಟಾಗಿ ಉಳಿದಿಲ್ಲ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *