ರಾಜ್ಯ

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಹೈಕೋರ್ಟ್ ಸೂಚನೆಯಂತೆ ಅಗತ್ಯ ತಯಾರಿ

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಾರ್ಡುವಾರು ಮತದಾರರ ಪಟ್ಟಿ ತಯಾರಿಸಿ ಎಂದ ರಾಜ್ಯ ಚುನಾವಣಾ ಆಯೋಗ

ಬೆಂಗಳೂರು prajakiran.com :
ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ವಾರ್ಡುವಾರು ಮತದಾರರ ಪಟ್ಟಿ ತಯಾರಿಸುವಂತೆ ರಾಜ್ಯ ಚುನಾವಣಾ ಆಯೋಗ ಧಾರವಾಡ ಜಿಲ್ಲಾಧಿಕಾರಿಗೆ ಸೂಚಿಸಿದೆ‌.

ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡುವಾರು ಮತದಾರರ ಪಟ್ಟಿಗಳನ್ನು ತಯಾರಿಸುವ ಕುರಿತಂತೆ ವೇಳಾಪಟ್ಟಿಯನ್ನು ನಿಗದಿಪಡಿಸಿ ಸೂಚನೆಗಳನ್ನು ನೀಡಲಾಗಿದೆ .

ಸರ್ಕಾರವು ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ/ಉಪ ಚುನಾವಣೆ ಹಾಗೂ ಸದರಿ ಸಂಸ್ಥೆಗಳ ಅಧ್ಯಕ್ಷರು / ಉಪಾಧ್ಯಕ್ಷರ ಚುನಾವಣೆಗಳನ್ನು ದಿನಾಂಕ : 26-4-2021 ಆರು ಅವಧಿಗೆ ಮುಂದೂಡಿರುವುದರಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಆಯೋಗವು ನಿಗದಿಪಡಿಸಿರುವ ಕಾರ್ಯಕ್ರಮ ವೇಳಾಪಟ್ಟಿಯಂತೆ ಮತದಾರರ ಪಟ್ಟಿಯ ತಯಾರಿಕೆ ಕಾರ್ಯವನ್ನು ಕೈಗೊಳ್ಳಬೇಕೋ ಅಥವಾ ಸದ್ಯಕ್ಕೆ ಸ್ಥಗಿತಗೊಳಿಸಬೇಕೇ ಎಂಬ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಕೋರಿದ್ದಕ್ಕೆ ಅಗತ್ಯ ಸ್ಪಷ್ಟನೆ ನೀಡಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ಸಂಬಂಧ ರಾಜ್ಯ ಉಚ್ಛ ನ್ಯಾಯಾಲಯ , ಬೆಂಗಳೂರು ಇಲ್ಲಿ ದಾಖಲಾಗಿದ್ದ ಪ್ರಕರಣ ಸಂಖ್ಯೆ : W.P.No.49814 / 2019 cfw W.P.No.245 / 2020 ರ ರ ಪ್ರಕರಣದಲ್ಲಿ ದಿನಾಂಕ : 17-12-2020ರ ಆದೇಶದಲ್ಲಿ ಸೂಚಿಸಿರುವ ಕಾಲ ಮಿತಿಯೊಳಗಾಗಿ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿರುವುದರಿದ ಆಯೋಗವು ದಿನಾಂಕ : 14-6-2021ರಂದು ನೀಡಿರುವ ಕಾರ್ಯಕ್ರಮ ಪಟ್ಟಿಯಂತೆ ಮತದಾರರ ಪಟ್ಟಿಯನ್ನು ತಯಾರಿಸಲು ಕ್ರಮ ವಹಿಸತಕ್ಕದ್ದೆಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *