ರಾಜ್ಯ

ಹು-ಧಾ ಮ.ನ.ಪಾ ಚುನಾವಣೆ: ಸೆ.3 ರ ಮತದಾನ ದಿನದಂದು ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕ ರಜೆ

 ಖಾಸಗಿ ವಲಯ ನೌಕರರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ prajakiran.com ಆ.31:
ಹುಬ್ಬಳ್ಳಿ ಧಾರವಾಡ
ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ.

ಮತದಾನ ದಿನದಂದು ಎಲ್ಲ ವರ್ಗದ ನೌಕರ ಮತದಾರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಮಹಾನಗರ ವ್ಯಾಪ್ತಿಯ ಎಲ್ಲ ಸರಕಾರಿ, ಅರೆ ಸರಕಾರಿ ಇಲಾಖೆ, ಖಾಸಗಿ ಉದ್ಯೋಗದಾತರು ಈ ಕುರಿತು ಕ್ರಮವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಾನಗರ ಪಾಲಿಕೆ ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟಂಬರ್ 3 ರಂದು ಶುಕ್ರವಾರ ಮತದಾನ ನಡೆಸಲಿದ್ದು, ಚುನಾವಣೆ ನಡೆಯುವ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು.

ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾರರಿಗೆ ಮತ ನೀಡಲು ಅನುಕೂಲವಾಗಲು ಆಯಾ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು, ಆದರೆ ಚುನಾವಣೆ ನಡೆಯುತ್ತಿರುವ ವಾರ್ಡಿನ ವ್ಯಾಪ್ತಿಯಲ್ಲಿ ನೊಂದಾಯಿತ ಮತದಾರರ ಆಗಿರುವವರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯವಾಗುವುದಿಲ್ಲ, ತುರ್ತುಸೇವೆ ಅಡಿ ಕೆಲಸ ಮಾಡುವ ನೌಕರರಿಗೆ ಮತಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ.

ಮತ್ತು ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು. ಈ ಆದೇಶವು ಸೆಕ್ಷನ್ 25, ನೆಗೋಷಿಯೆಬಲ್ ಇನ್ಸ್ಟ್ರಮೆಂಟ್ ಆಕ್ಟ್ 1881 ರಡಿ ಬರುವ ಎಲ್ಲಾ ಸಂಸ್ಥೆಗಳಿಗೂ ಸಹ ಅನ್ವಯಿಸುತ್ತದೆ.

ಸಂಬಂದಿಸಿದ ಎಲ್ಲ ಸಾರ್ವಜನಿಕ ಉದ್ದಿಮೆಗಳು, ಖಾಸಗಿ ಕಂಪನಿ, ವ್ಯವಹಾರಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳವರು ಈ ಅಧಿಸೂಚನೆ ಯನ್ನು ಪಾಲಿಸಿ, ಎಲ್ಲ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸೆ. 3 ರಂದು ವೇತನ ಸಹಿತ ರಜೆ ನೀಡಬೇಕೆಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರು ಆದೇಶದಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *