ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ 842 ಮತಯಂತ್ರಗಳ ಬಳಕೆ

55 ವಾಹನ ಮತ್ತು 3,704 ಸಿಬ್ಬಂದಿಗಳ ನೇಮಕ* – *ಜಿಲ್ಲಾಧಿಕಾರಿ ನಿತೇಶ್ ಪಾಟೀಲ*

ಧಾರವಾಡ prajakiran.com ಆ.30 : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆಯ 82 ವಾರ್ಡ್‍ಗಳಿಗೆ ಚುನಾವಣೆ ಜರುಗಿಸಲು ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಅವರು ಇಂದು ಮಧ್ಯಾಹ್ನ ನಗರದ ಬಾಸೆಲ್ ಮಿಶನ್ ಶಾಲಾ ಕಟ್ಟಡದಲ್ಲಿ ಸ್ಥಾಪಿಸಿರುವ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು.

*ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ವಶಕ್ಕೆ ಪಡೆದ ಆಯುಧಗಳು* : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನುಮತಿ ಪಡೆದ 1,015 ಶಸ್ತಾಸ್ತ್ರಗಳ ಪೈಕಿ 913 ಶಸ್ತಾಸ್ತ್ರಗಳನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. 100 ಆಯುಧಗಳಿಗೆ ವಿನಾಯಿತಿ ನೀಡಲಾಗಿದ್ದು, ಬಾಕಿ ಇರುವ 2 ಆಯುಧಗಳನ್ನು ಶೀಘ್ರ ವಶಪಡಿಸಿಕೊಳ್ಳಲು ಇಲಾಖೆ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.

ಮಹಾನಗರ ಪಾಲಿಕೆಯ 82 ವಾರ್ಡ್‍ಗಳಲ್ಲಿ 4,06,280 ಪುರುಷ ಹಾಗೂ 4,11,092 ಮಹಿಳಾ ಮತ್ತು 86 ಇತರೆ ಸೇರಿ ಒಟ್ಟು 8,17,458 ಮತದಾರರು ಪಾಲಿಕೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ.

*ಮತಗಟ್ಟೆಗಳು*: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 82 ವಾರ್ಡ್‍ಗಳಲ್ಲಿನ ಮತದಾರರ ತಮ್ಮ ಹಕ್ಕು ಚಲಾಯಿಸಲು ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

*108 ವಲ್ನರೇಬಲ್ ಮತಗಟ್ಟೆಗಳು* : ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಚುನಾವಣೆಗಾಗಿ ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ ಪೊಲೀಸ್ ಇಲಾಖೆಯಿಂದ 108 ಗಿuಟಟಿeಡಿಚಿbಟe (ದುರ್ಬಲ) ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ವಿಡಿಯೋ ಚಿತ್ರೀಕರಣಕ್ಕೆ ಆದೇಶಿಸಲಾಗಿದೆ.

*ಮತದಾನ ಪೂರ್ವ 48 ಗಂಟೆ*: ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಪ್ರಾರಂಭವಾಗುವ ಅವಧಿಯ 48 ಗಂಟೆ ಮುಂಚಿತವಾಗಿ ಚುನಾವಣಾ ಪ್ರಚಾರಕ್ಕೆ ಅವಕಾಶವಿರುವುದಿಲ್ಲ.

ಮತದಾನ ದಿನದಂದು 155 ವಾಹನಗಳ ಬಳಕೆ : ಪಾಲಿಕೆಯ ಚುನಾವಣೆಗೆ ಮತಗಟ್ಟೆ ಸಿಬ್ಬಂದಿ ಹಾಗೂ ಮತಯಂತ್ರಗಳ ಸಾಗಾಣಿಕೆಗಾಗಿ ವಿವಿಧ ರೀತಿಯ 155 ವಾಹನಗಳನ್ನು ಬಳಸಲಾಗುತ್ತಿದೆ.

ಇದರಲ್ಲಿ 67 ಬಸ್, 24 ಮಿನಿಬಸ್, 41 ಮ್ಯಾಕ್ಸಿಕ್ಯಾಬ್ ಮತ್ತು 23 ಜೀಪ್ ಹಾಗೂ ಟ್ಯಾಕ್ಸ್ ಸೇರಿವೆ ಎಂದು ಅವರು ಹೇಳಿದರು.

*ಮತದಾನ ದಿನದ ಸಿಬ್ಬಂದಿ ವಿವರ*: ಮಹಾನಗರ ಪಾಲಿಕೆಯ 82 ವಾರ್ಡ್‍ಗಳಿಗೆ ಸಂಬಂಧಿಸಿದಂತೆ, 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಜರುಗಿಸಲು ಅಗತ್ಯವಿರುವಂತೆ 336 ಮೀಸಲು ಸಿಬ್ಬಂದಿ ಸೇರಿ ಒಟ್ಟು 3,704 ವಿವಿಧ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು

*ನೋಟಾ ಮತ ಚಲಾವಣೆಗೆ ಅವಕಾಶ* : ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಪ್ರಕರಣ 14ಕ್ಕೆ ತಿದ್ದುಪಡಿ ಮಾಡಲಾಗಿದ್ದು “ಅರ್ಹ ಮತದಾರನು, ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಪೈಕಿ ಯಾವೊಬ್ಬ ಅಭ್ಯರ್ಥಿಯ ಪರವಾಗಿ ತನ್ನ ಮತದಾನವನ್ನು ಚಲಾಯಿಸಲು ಇಚ್ಚಿಸದಿರುವ ಸಂದರ್ಭದಲ್ಲಿ ಆತನು “None of the above” (NOTA) (ಮೇಲಿನ ಯಾರೊಬ್ಬರಿಗೂ ಇಲ್ಲ) ಎಂದು ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

*ಕೋವಿಡ್-19 ಸೋಂಕಿತರಿಗೂ ಮತದಾನಕ್ಕೆ ಅವಕಾಶ*: ಕೋವಿಡ್-19 ಸೋಂಕಿತರಿಗೂ ಮತದಾನ ಚಲಾಯಿಸಲು ಅವಕಾಶ ಕಲ್ಪಿಸಿದ್ದು, ಮತದಾನ ಮುಕ್ತಾಯವಾಗುವ ಒಂದು ಗಂಟೆ ಮುಂಚಿತವಾಗಿ ಸೋಂಕಿತರು ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಮತದಾನ ಮಾಡಲು ಅವಕಾಶ ನೀಡಲಾಗುವುದು.

ಈ ಕುರಿತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ವೈಧ್ಯಾಧಿಕಾರಿ ಶ್ರೀಧರ ದಂಡೆಪ್ಪನವರ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಮೊ.ನಂ. 7019096595 ಸಂಪರ್ಕಿಸಬಹುದು. ಸೋಂಕಿತ ಮತದಾರರು ಮತದಾನ ಮಾಡಲು ಇಚ್ಛಿಸಿದಲ್ಲಿ ಸೆ. 02 ರೊಳಗಾಗಿ ಈ ಕುರಿತು ನೋಡಲ್ ಅಧಿಕಾರಿಗಳಿಗೆ ಮಾಹಿತಿ ಒದಗಿಸಲು ಜಿಲ್ಲಾಧಿಕಾರಿಗಳು ತಿಳಿಸಿದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *