ಬೆಂಗಳೂರು prajakiran.com : ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು.
ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ ಈ ‘ಶತಮಾನದ ಮಹಾ ಸುಳ್ಳುಗಾರ‘ ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಗುಡುಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರ ಕಾಲದಲ್ಲಿ ಮಾಡಿದ ಸಾಲ ಮನ್ನಾ ದಲ್ಲಿ ಲೋಪದೋಷಗಳು ಇದ್ದವು.
ಪತ್ರಕರ್ತರ ಪ್ರಶ್ನೆಗೆ ನಾನು ಪ್ರತಿಕ್ರಿಯಿಸಿದ್ದೆ. ನಾನು ಮಾಡಿದ 25 ಸಾವಿರ ಕೋಟಿ ರೂಪಾಯಿಗಳ ಸಾಲಮನ್ನಾದಲ್ಲಿ ಇಂತಹ ಅನ್ಯಾಯಗಳನ್ನು ಸರಿಪಡಿಸಿದ್ದೆ.
ಇದರಲ್ಲಿ ಹುಳುಕು ಹುಡುಕುವ ಕಾಂಗ್ರೆಸ್ ನಾಯಕರು ಅನ್ನದಾತನಿಗೆ ಮಂಕು ಬೂದಿ ಎರಚಲು ಯತ್ನಿಸುತ್ತಿದ್ದಾರೆ ಎಂದು ಕುಟುಕಿದ್ದಾರೆ.
ಅಲ್ಲದೆ, ನಾನು ಚುನಾವಣೆ ಬಂದಾಗ ಜಾತಿ ಕಾರ್ಡ್ ಪ್ಲೇ ಮಾಡುತ್ತೇನೆ ಎಂದು ಮೂದಲಿಸುವ ಸಿದ್ದರಾಮಯ್ಯ ‘ಅಹಿಂದ‘ ರಾಮಯ್ಯ ಆಗಿದ್ದು ಏಕೆ?
ನಕಲಿ ಸಮಾಜವಾದಿಯ ‘ಅಹಿಂದ‘ ಮುಖವಾಡ ಇಡೀ ನಾಡಿಗೆ ಗೊತ್ತಿದೆ ಎಂದು ಸಿದ್ದರಾಮಯ್ಯ ವಿರುದ್ದದ ಸಮರ ಮುಂದುವರೆಸಿದ್ದಾರೆ.