ರಾಜ್ಯ

ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು prajakiran.com : ವಯಸ್ಸಿನ ಕಾರಣದಿಂದಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಸವರಾಜ ಬೊಮ್ಮಾಯಿ ಸರ್ಕಾರ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಹೊರಡಿಸಲಾಗಿದೆ.

29 ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಡಳಿತಾವಧಿ ಇರುವವರೆಗೆ ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸಚಿವರಿಗೆ ಸಿಗುವ ಎಲ್ಲಾ ಸೌಲಭ್ಯಗಳು ದೊರೆಯಲಿವೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *