ಅಂತಾರಾಷ್ಟ್ರೀಯ

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ

ಹಿಮಾಚಲ ಪ್ರದೇಶ prajakiran.com : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ವೀರಭದ್ರ ಸಿಂಗ್ (87) ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೀರಭದ್ರ ಸಿಂಗ್ ಅವರು ನಿಧನರಾಗಿದ್ದಾರೆ.

ಏಪ್ರಿಲ್ ನಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದ ವೀರಭದ್ರ ಸಿಂಗ್ ಅವರು ಗುಣಮುಖರಾಗಿ ಮನೆಗೆ ಮರಳಿದ್ದರು.

ಬಳಿಕ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹಿಮಾಚಲ ಪ್ರದೇಶದಲ್ಲಿ 6 ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿದ್ದ ವೀರಭದ್ರಸಿಂಗ್ ಅವರು, 9 ಬಾರಿ ಶಾಸಕರಾಗಿಯೂ, 5 ಬಾರಿ ಸಂಸದರಾಗಿ ಸೇವೆ ಸಲ್ಲಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *