ಜೈಪುರ್ prajakiran.com :
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ ಪಹಾಡಿಯಾ (88) ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜಗನ್ನಾಥ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪಹಾಡಿಯಾ ನಿಧನಕ್ಕೆ ಸಿಎಂ ಅಶೋಕ್ ಗೆಹ್ಲೋಟ್, ಪಹಾಡಿಯಾ ಅವರ ನಿಧನದಿಂದ ತುಂಬಾ ದುಃಖವಾಗಿದೆ.
ಕೋವಿಡ್ ಅವರ ಜೀವವನ್ನು ಬಲಿಪಡೆದಿದೆ. ಮೊದಲಿನಿಂದಲೂ ಅವರಿಗೆ ನನ್ನ ಬಗ್ಗೆ ತುಂಬಾ ಪ್ರೀತಿ ಇತ್ತು ಎಂದು ಸಂತಾಪ ಸೂಚಿಸಿದ್ದಾರೆ.