ರಾಜ್ಯ

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಕರೋನಾ

ಬೆಂಗಳೂರು prajakiran.com : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ.

ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನಾರ್ಧನ ರೆಡ್ಡಿ ಅವರು ಭಾನುವಾರ ಬಳ್ಳಾರಿಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ತಾಯಿ ಹೊನ್ನಮ್ಮಅವರ ಶಿವಗಣರಾಧನೆಗೆ ತೆರಳಬೇಕಾಗಿತ್ತು.

ಇದಕ್ಕೂ ಮುನ್ನ ಶನಿವಾರ ಸಂಜೆ ಅವರು ಕರೋನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಕುರಿತಂತೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಜನಾರ್ಧನ ರೆಡ್ಡಿಯವರು,

“ನನಗೆ ಕರೋನಾ ಸೊಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ನಾನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವೆ.

ಆ ಕಾರಣದಿಂದ ನಾನು ಆಗಸ್ಟ್ ೩೦ ರಂದು ಬಳ್ಳಾರಿಗೆ ಭೇಟಿ ನೀಡಿ ನನ್ನ ಪ್ರಾಣ ಸ್ನೇಹಿತ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿಯವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.

ಆಸ್ಪತ್ರೆಯಲ್ಲಿ ಉತ್ತಮ ವೈದ್ಯರ ತಂಡ ನನಗೆ ಚಿಕಿತ್ಸೆ ನೀಡುತ್ತಿದೆ. ನನಗೆ ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ಕರೋನಾ ಪಾಸಿಟಿವ್ ಬಂದಿದೆ.

ನಿಮ್ಮೆಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ ಮನೆಗೆ ಮರಳಲಿದ್ದೇನೆ ಎಂದು ವಿವರಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *